ಬ್ರೇಕಿಂಗ್ ನ್ಯೂಸ್
05-09-25 11:15 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಒತ್ತಾಯಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಸೋನಿಯಾಗೆ ಪತ್ರ ಬರೆದಿದ್ದು, ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.
'ಹೆಣ್ಮಕ್ಕಳನ್ನು ಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ಮಹಿಳಾ ಸಂಘಟನೆಗಳು ತೀವ್ರ ಆತಂಕ ಹೊರಹಾಕಿವೆ. ಅಲ್ಲದೇ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಈ ಪತ್ರವು ಮನವಿ ರೂಪದ ಆಗ್ರಹವಾಗಿದೆ. ಪ್ರಮುಖವಾಗಿ ವೇದವಲ್ಲಿ ಪ್ರಕರಣ, ಸೌಜನ್ಯ ಪ್ರಕರಣ ಹಾಗೂ ಪದ್ಮಲತಾ ಸಾವಿನ ತನಿಖೆ ಆಗಬೇಕು. ಇವರನ್ನು ಕೊಂದವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಎಸ್ಐಟಿ ತನಿಖೆ ಜಾರಿಯಲ್ಲಿರುವಾಗಲೇ, ಧರ್ಮಸ್ಥಳ ಪ್ರಕರಣ ಷಡ್ಯಂತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದು ಆತಂಕಕಾರಿ ಬೆಳವಣಿಗೆ. ಇದಕ್ಕೆ ಮಹಿಳಾ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಸಚಿವ ಪರಮೇಶ್ವರ್ ಕೂಡ ಬೆಂಬಲ ಕೊಟ್ಟಿರುವುದು ಸರಿಯಲ್ಲ. ಹೀಗಾಗಿ ಎಸ್‌ಐಟಿ ನ್ಯಾಯಸಮ್ಮತ ತನಿಖೆ ನಡೆಸಲು ಸರ್ಕಾರ ಸಹಕಾರ ಕೊಡಬೇಕು, ಸೌಜನ್ಯಾ ಪ್ರಕರಣವೂ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು ಎಂದು ಪತ್ರ ಬರೆದಿದ್ದಾರೆ.
ಅಲ್ಲದೆ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ನಡೆದ 200 ಕ್ಕೂ ಹೆಚ್ಚು ಅನಧಿಕೃತ ಸಾವಿನ ಬಗ್ಗೆ ವಿ.ಎಸ್ ಉಗ್ರಪ್ಪ ಸಮಿತಿ ಕೊಟ್ಟ ವರದಿಯನ್ನೂ ಸರಿಯಾಗಿ ತನಿಖೆ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಒಕ್ಕೂಟ, ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ಮಾಧ್ಯಮಗಳ ವರದಿಗಳ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಿದೆ.
ಆರ್‌ಟಿಐ ದಾಖಲೆ ಅನ್ವಯ 2001-2012 ರ ನಡುವೆ ಉಜಿರೆ ಮತ್ತು ಧರ್ಮಸ್ಥಳದಲ್ಲಿ 424 ಸಾವುಗಳು ಸಂಭವಿಸಿವೆ. ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿದರೂ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಜುಲೈ ತಿಂಗಳ ಆರಂಭದಲ್ಲಿ ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಹಲವು ಸಾವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವುದಾಗಿ ಮಾಧ್ಯಮಗಳ ಮುಂದೆ ಬಂದಿದ್ದ. ಮಾಧ್ಯಮಗಳು ಹಾಗೂ ಕೆಲವು ರಾಜಕೀಯ ಮುಖಂಡರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ. ಸುಜಾತ ಭಟ್ ಗೆ ರಕ್ಷಣೆ ಕೊಡಬೇಕಾಗಿತ್ತು, ಕೊಟ್ಟಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
Amidst mounting suspicions and growing public concern over the alleged mass burial of women in Dharmasthala, several women’s organizations have written an open letter to Congress leader Sonia Gandhi, urging her to intervene and seek justice. Titled "Who Killed the Women in Dharmasthala?", the letter questions the integrity of the ongoing SIT investigation and calls for transparency and accountability.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am