Fine, Violation, Home Minister: ಮುಖ್ಯಸ್ಥರಿಗೂ ಪೊಲೀಸರ ಫೈನ್, ರಿಯಾಯಿತಿ ದರದಲ್ಲಿ ದಂಡ ಕಟ್ಟಿದ ಪರಮೇಶ್ವರ್ 

07-09-25 10:17 am       Bangalore Correspondent   ಕರ್ನಾಟಕ

ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವ ಪರಮೇಶ್ವರ್ ಅವರಿಗೇ ಪೊಲೀಸರು ದಂಡ ವಿಧಿಸಿದ್ದಾರೆ. ಅವರು ಸಂಚರಿಸುವ ವಾಹನ KA04 GB 0555 ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ರಿಯಾಯಿತಿ ದರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 

ಬೆಂಗಳೂರು, ಸೆ.7 : ಕರ್ನಾಟಕ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿರುವ ಗೃಹ ಸಚಿವ ಪರಮೇಶ್ವರ್ ಅವರಿಗೇ ಪೊಲೀಸರು ದಂಡ ವಿಧಿಸಿದ್ದಾರೆ. ಅವರು ಸಂಚರಿಸುವ ವಾಹನ KA04 GB 0555 ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ರಿಯಾಯಿತಿ ದರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 

ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ಟೊಯೊಟಾ ಫಾರ್ಚುನರ್ ಕಾರ್‌ಗೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬೆಂಗಳೂರು ಸಂಚಾರ ಪೊಲೀಸರು ದಂಡ ವಿಧಿಸಿದ್ದರು. ಸೀಟ್ ಬೆಲ್ಟ್ ಧರಿಸದೆ ಆರು ಬಾರಿ ಸಂಚಾರ ಮಾಡಿದ್ದ ಸಿಎಂ ಅವರ ವಾಹನಕ್ಕೆ 50% ರಿಯಾಯಿತಿ ಆಫರ್‌ನಡಿ 2,500 ರೂಪಾಯಿ ದಂಡವನ್ನು ವಿಧಿಸಲಾಗಿತ್ತು. 

ಸಾರ್ವಜನಿಕರ ಒತ್ತಡ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾದ ನಂತರ ಸಿಎಂ ದಂಡವನ್ನೂ ಕಟ್ಟಿದ್ದರು. ಇದೀಗ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ವಾಹನಕ್ಕೂ ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ. ರಿಯಾಯಿತಿ ಆಧಾರದಲ್ಲಿ 4,500 ರೂಪಾಯಿ ದಂಡವನ್ನು ಪಾವತಿಸಿ, ಕಾನೂನು ಎಲ್ಲರಿಗೂ ಒಂದೇ ಎಂದು  ಮಾದರಿ ಎನಿಸಿದ್ದಾರೆ.

ಜಾಲತಾಣಗಳಲ್ಲಿ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, 'ನಿಯಮ ಎಲ್ಲರಿಗೂ ಒಂದೇ' ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರ ಕಟ್ಟುನಿಟ್ಟಿನ ಕ್ರಮವನ್ನು ಕೆಲವರು ಶ್ಲಾಘಿಸಿದ್ದಾರೆ.

In a rare yet notable instance of accountability, Karnataka Home Minister Dr. G. Parameshwara has been fined by the city’s traffic police for a traffic rule violation committed by his official vehicle. The vehicle, bearing registration number KA04 GB 0555, reportedly violated traffic regulations and was issued a fine of ₹4,500, which was paid under the government’s discounted fine scheme.