ಬ್ರೇಕಿಂಗ್ ನ್ಯೂಸ್
09-09-25 09:14 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9 : ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದು ಅಸಮಾಧಾನ ಹೊರಹಾಕಿದ್ದಾರೆ. ಸ್ಪೀಕರ್ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಾರೆ, ಈವರೆಗೆ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ಮುಂದೆಯೂ ಇದೇ ರೀತಿಯಾದರೆ ನಡೆಯಲ್ಲ ಎಂದು ಹೇಳಿ ಅಸಮಾಧಾನ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಯುಟಿ ಖಾದರ್ ಗೆ ನೇರವಾಗಿ ಪತ್ರ ಬರೆದಿರುವ ಸಭಾಪತಿ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ. ಪುಸ್ತಕ ಮೇಳ, ಲೇಸರ್ ಲೈಟ್ ಅಳವಡಿಕೆಗೂ ಯಾವುದೇ ಅಭಿಪ್ರಾಯ ಪಡೆದಿಲ್ಲ. ಸಿಪಿಎ ಕಾಮನ್ ವೆಲ್ತ್ ಸಮ್ಮೇಳನ ಆಯೋಜನೆಯ ರೂಪುರೇಷೆಗೂ ನಮ್ಮ ಅಭಿಪ್ರಾಯ ಕೇಳಿಲ್ಲ. ಯಾವುದೇ ಕಾರ್ಯಕ್ರಮ ನಡೆದರೂ ಸೌಜನ್ಯಕ್ಕೂ ಮುಂಚೆಯೇ ಹೇಳುವುದಿಲ್ಲ. ಇವೆಲ್ಲವನ್ನೂ ಇಲ್ಲಿಯವರೆಗೆ ಸಹಿಸಿಕೊಂಡು ಬಂದಿದ್ದೇನೆ.
ಮುಂದೆ ಹೀಗೆ ಆಗುವುದಿಲ್ಲ ಎಂದು ಭಾವಿಸುತ್ತೇನೆಂದು ಪತ್ರದಲ್ಲಿ ಆಕ್ಷೇಪಿಸಿದ್ದಾರೆ.
ವಿಧಾನ ಮಂಡಲದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಮತ್ತು ಕರ್ನಾಟಕ ವಿಧಾನಸಭೆ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ದ್ವಿಸದನ ಇರುವ ರಾಜ್ಯದಲ್ಲಿ ವಿಧಾನ ಮಂಡಲದಿಂದ ನಡೆಯುವ ಸಚಿವಾಲಯದ ಕಚೇರಿ ಕಾರ್ಯಕ್ರಮಗಳು ಸಹ ಇದೇ ದೃಷ್ಟಿಯಲ್ಲಿ ಸಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ನನ್ನನ್ನು ಸೌಜನ್ಯಕ್ಕಾದರು ಅಧಿಕೃತ ಕಾರ್ಯಕ್ರಮದ ಬಗ್ಗೆ ರೂಪರೇಷಗಳನ್ನು ಸಿದ್ಧಪಡಿಸಲು ಸಂಪರ್ಕಿಸದೆ ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುವುದು ಅತ್ಯಂತ ಬೇಸರದ ಸಂಗತಿಯಾಗಿದೆ.
ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿದ್ದು, ವಿಧಾನಸೌಧ ಕಟ್ಟಡಕ್ಕೆ ಲೇಸರ್ ದೀಪ ಅಳವಡಿಸುವ ಯೋಜನೆ, 11ನೇ ಸಿಪಿಎ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್, ಭಾರತ ವಲಯದ ಸಮ್ಮೇಳನ ಆಯೋಜನೆ ಬಗ್ಗೆ ಕಾರ್ಯಕ್ರಮಗಳ ರೂಪರೇಷೆ ಮಾಡುವಲ್ಲಿ ನನ್ನನ್ನು ಸೌಜನ್ಯಕ್ಕಾದರು ಸಂಪರ್ಕಿಸಿಲ್ಲ. ಸದರಿ ಕಾರ್ಯಕ್ರಮದ ಬಗ್ಗೆ ಪತ್ರಿಕಾಗೋಷ್ಠಿಯನ್ನು ಏಕಪಕ್ಷಿಯವಾಗಿ ನಡೆಸುತ್ತಿರುವುದು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ.
ನನ್ನ ಸುದೀರ್ಘ ರಾಜಕೀಯ ಹಿನ್ನೆಲೆ ಹಾಗೂ ಅನ್ಯ ರಾಜ್ಯಗಳ ಪೀಠಾಸೀನಾಧಿಕಾರಿಗಳ ನಿಕಟ ಸಂಪರ್ಕದಿಂದ ಹೊರ ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಪೀಠಾಸೀನಾಧಿಕಾರಿಗಳು, ಶಾಸಕರು ಹಾಗೂ ಗಣ್ಯರುಗಳೊಂದಿಗೆ 11ನೇ ಸಿಪಿಎ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಷಿಯೇಷನ್‌ಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಹಾಗೂ ಆತ್ಮೀಯ ಮಾಹಿತಿ ವಿನಿಮಯ ಮಾಡುವಲ್ಲಿ ಮುಜುಗರ ಉಂಟಾಗುತ್ತಿದೆ. ಇತ್ತೀಚೆಗೆ ತಾವು ಬಾರ್ಬಡೊಸ್ ನಲ್ಲಿ ನಡೆಯುವ ಕಾಮನ್‌ವೆಲ್ತ್ ಕಾನ್ಸರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 21 ದಿನಗಳ ಅಧಿಕೃತ ಪ್ರವಾಸ ಪಟ್ಟಿಯನ್ನು ನನ್ನ ಸಲಹೆಯನ್ನು ಪಡೆಯದೆ ತಯಾರಿಸಿದ್ದು ಅನ್ಯ ಮೂಲಗಳಿಂದ ತಿಳಿದಿದ್ದು ನೋವಿನ ಸಂಗತಿಯಾಗಿದೆ.
ಅಧಿಕೃತ ಕಾರ್ಯಕ್ರಮದಲ್ಲಿ ಅಧ್ಯಯನ ಪ್ರವಾಸ ಯಾವ ದೇಶಕ್ಕೆ ಹೋಗಬೇಕು ಎಂದು ನಿರ್ಧರಿಸುವ ಹಕ್ಕು ನನಗಿಲ್ಲವೆಂದು ಭಾಸವಾಗುತ್ತಿದೆ. ನಿಮಗೆ ಅನುಕೂಲವಾಗುವ ರೀತಿ ಕಾರ್ಯಕ್ರಮವನ್ನು ರೂಪಿಸಿ ಒತ್ತಾಯಪೂರ್ವಕವಾಗಿ ನಾನು ಅದರಲ್ಲಿ ಭಾಗವಹಿಸುವಂತೆ ಮಾಡುವ ಸಂದಿಗ್ಧತೆಯ ಅವಶ್ಯಕತೆ ಏನು ಎನ್ನುವುದು ನನಗೆ ಒಗಟಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
Karnataka Legislative Council Chairman Basavaraj Horatti has written a strongly worded letter to Assembly Speaker U.T. Khader, expressing deep dissatisfaction over what he described as "unilateral decisions" being made without consulting the Council or its presiding officer.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am