ಬ್ರೇಕಿಂಗ್ ನ್ಯೂಸ್
19-09-25 09:42 am Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹೇಳಿಕೊಳ್ಳಲು ನಮ್ಮೂರು ರಾಜ್ಯ ರಾಜಧಾನಿ, ಆದ್ರೆ ಪ್ರತಿ ರಸ್ತೆಗಳು ಗುಂಡಿಮಯವಾಗಿದೆ. ಐಟಿ-ಬಿಟಿ ಸಿಟಿಯ ಅಭಿವೃದ್ಧಿ ಎಲ್ಲಿ? ಟ್ಯಾಕ್ಸ್ ಹಣ ಏನಾಗ್ತಿದೆ ಎಂದು ಬೆಂಗಳೂರಿಗರು ಪ್ರಶ್ನೆ ಮಾಡ್ತಿದ್ದಾರೆ. ಗುಂಡಿಗಳ ಅವಾಂತರ ಕಂಡು ಐಟಿ ಕಂಪನಿಗಳೇ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ಐಟಿ ದಿಗ್ಗಜರು ಅಸಮಾಧಾನ ಹೊರ ಹಾಕ್ತಿದ್ದಂತೆ ವಿಪಕ್ಷ ನಾಯಕರು ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಅವ್ಯವಸ್ಥೆಗೆ ಸಿಎಂ, ಡಿಸಿಎಂ ನೇರ ಹೊಣೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
'ಬೆಂಗಳೂರು ಈಗ ಗುಂಡಿಯೂರು';
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಗ್ರೇಟರ್ ಬೆಂಗಳೂರು ಎಂದರೆ ಇದೇನಾ?:
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?
ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ.
ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.
ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ.
Once hailed as the pride of Karnataka and India’s premier IT capital, Bengaluru is now grappling with severe infrastructure issues. From crater-filled roads to mounting garbage piles, the city’s crumbling civic conditions have triggered widespread criticism, the latest coming from Union Minister and senior JD(S) leader H.D. Kumaraswamy.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm