ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶಿಕ್ಷಕರ ನೇಮಕ, ವಿವಾದಿತ ಕ್ರಿಶ್ಚಿಯನ್ ಉಲ್ಲೇಖದ ಕಾಲಂ ತೆಗೆದು ಹಾಕಿದ್ದೇವೆ, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ 

20-09-25 10:26 pm       HK News Desk   ಕರ್ನಾಟಕ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗದಗ, ಸೆ.20 : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗದಗದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಈ ವಿಷಯದಲ್ಲಿ "ರಾಜಕೀಯ ಮಾಡುತ್ತಿದೆ" ಎಂದು ಆರೋಪಿಸಿದರು. ಉಪ ಜಾತಿ ವರ್ಗದಲ್ಲಿ 'ಕ್ರಿಶ್ಚಿಯನ್' ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಈಗ ಅದನ್ನು ತೆಗೆದು ಹಾಕಲಾಗಿದೆ" ಎಂದು ಹೇಳಿದರು. 

ಅದನ್ನು ತೆಗೆದುಹಾಕಿದ್ದು ನಾನಲ್ಲ. ಹಿಂದುಳಿದ ವರ್ಗಗಳ ಆಯೋಗ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ ಎಂದರು.

ಬಿಜೆಪಿ ನಾಯಕರು ಸಲ್ಲಿಸಿದ ಪತ್ರವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಮಗೆ ಕಳುಹಿಸಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. "ಇದನ್ನು ಹೇಳಿದ್ದು ರಾಜ್ಯಪಾಲರಲ್ಲ. ನಾನು ನೋಡಿದ್ದೇನೆ. ಬಿಜೆಪಿ ರಾಜಕೀಯ ಕಾರಣಗಳಿಗಾಗಿ ಇದನ್ನು ಮಾಡುತ್ತಿದೆ. ನಾನು ಬಿಜೆಪಿಗೆ ಉತ್ತರಗಳನ್ನು ನೀಡುತ್ತಲೇ ಇರಬೇಕೇ?" ಎಂದು ಸಿಎಂ ಪ್ರಶ್ನಿಸಿದರು.

ಕಾಂಗ್ರೆಸ್ ಜಾತಿಗಳನ್ನು ವಿಭಜಿಸುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ನಾವು ಯಾವಾಗ ಜಾತಿಗಳನ್ನು ಒಡೆದಿದ್ದೇವೆ? ಸರ್ಕಾರ ನಿಮ್ಮ(ಜನರ) ಸಾಮಾಜಿಕ- ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಅದನ್ನು ತಿಳಿಯದೆ ನಾವು ನಿಮಗಾಗಿ ನೀತಿಗಳನ್ನು ಹೇಗೆ ರೂಪಿಸಬಹುದು?" ಎಂದು ಪ್ರಶ್ನಿಸಿದರು.

Karnataka's much-awaited caste census has officially begun, with 1.75 lakh teachers assigned to collect data from 150 households each over a 15-day period. Controversy arose over a column listing various castes under the Christian religion, which has now been removed by the Backward Classes Commission. CM Siddaramaiah criticized BJP for politicizing the issue, emphasizing that the survey aims to understand the social, educational, and economic status of citizens to formulate effective policies, not to divide castes.