ಬ್ರೇಕಿಂಗ್ ನ್ಯೂಸ್
21-09-25 01:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21 : ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವ ಕುರಿತು ಆರೋಪ ಮಾಡಿರುವುದು ಸದ್ದು ಮಾಡಿರುವಾಗಲೇ ಕಲಬುರಗಿ ಜಿಲ್ಲೆ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ಪಟ್ಟಿಯಿಂದ ಹೆಸರುಗಳನ್ನು ತೆಗೆಯಲು ಮುಂದಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಎಡಿಜಿಪಿ ಬಿ.ಕೆ.ಸಿಂಗ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಿಐಡಿ ಎಸ್ ಪಿಗಳಾದ ಸೈದುಲು ಅದಾವತ್, ಶುಭಾನ್ವಿತಾ ಅವರು ತಂಡದ ಸದಸ್ಯರಾಗಿದ್ದಾರೆ. ಉಳಿದಂತೆ ತನಿಖಾ ತಂಡಕ್ಕೆ ಅಗತ್ಯವಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಬೇಕಿದೆ.
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರು. ಜತೆಗೆ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಕೆಲವು ದತ್ತಾಂಶ ಒದಗಿಸುವಂತೆ ಚುನಾವಣಾ ಆಯೋಗಕ್ಕೆ 18 ಬಾರಿ ಪತ್ರ ಬರೆದಿದ್ದರೂ ಉತ್ತರ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇದರ ನಡುವೆಯೇ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್‌ಐಟಿ ರಚಿಸಿದೆ. ಇದುವರೆಗೂ ತನಿಖೆ ನಡೆಸುತ್ತಿದ್ದ ಸಿಐಡಿ ಸೈಬರ್ ಪೊಲೀಸರ ತಂಡದಿಂದ ಎಸ್‌ಐಟಿಗೆ ಪ್ರಕರಣದ ಕಡತ ವರ್ಗಾವಣೆಯಾಗಲಿದೆ.
ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಿಂದ 6,670 ಮತದಾರರನ್ನು ಅನಧಿಕೃತವಾಗಿ ಕೈ ಬಿಡಲಾಗಿದೆ ಎಂದು ಆರೋಪಿಸಿ ಬಿ.ಆರ್.ಪಾಟೀಲ್ ಅವರು 2023ರ ಚುನಾವಣೆಗೆ ಮುನ್ನ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರ ಪರಿಗಣಿಸಿದ್ದ ಮತದಾರರ ನೋಂದಣಾಧಿಕಾರಿಯಾಗಿದ್ದ ಮಮತಾ ಕುಮಾರಿ ಹಾಗೂ ಇತರೆ ಅಧಿಕಾರಿಗಳು, ಆಂತರಿಕ ತನಿಖೆ ನಡೆಸಿದ್ದರು. ಆಗ ಮತದಾರರ ಪಟ್ಟಿಯಿಂದ 5,994 ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವುದು ಗೊತ್ತಾಗಿತ್ತು. ಹೀಗಾಗಿ, ಮಮತಾ ಕುಮಾರಿ ಅವರೇ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅಳಂದ ಪೊಲೀಸರಿಗೆ ದೂರು ನೀಡಿದ್ದು, 2023ರ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯು ಸಿಐಡಿಯ ಸೈಬರ್ ಪೊಲೀಸರಿಗೆ ವರ್ಗವಾಗಿತ್ತು.
The Karnataka government has constituted a Special Investigation Team (SIT) to probe allegations of large-scale voter list manipulation in the Aland Assembly constituency of Kalaburagi district. The move comes in the wake of Congress leader and Leader of Opposition in Lok Sabha, Rahul Gandhi, raising serious concerns about the illegal deletion of voters’ names.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am