ಬ್ರೇಕಿಂಗ್ ನ್ಯೂಸ್
22-09-25 07:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಕರ್ನಾಟಕ ಸರಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಒಕ್ಕಲಿಗರ ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಲಿಖಿತ ವಾದವನ್ನು ಸಲ್ಲಿಸಲು ಸೂಚಿಸಿ ಸೆ.23ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠವು, ಅರ್ಜಿಯ ಬಗ್ಗೆ ಪೂರ್ಣ ವಿಚಾರಣೆ ನಡೆಸಲಾಗುವುದು. ಆದರೆ ಮಧ್ಯಂತರ ತಡೆ ನೀಡುವುದಕ್ಕೆ ನಿರಾಕರಿಸಿ ಲಿಖಿತ ವಾದ ಸಲ್ಲಿಸಲು ಸಮಯಾವಕಾಶ ನೀಡಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿ, ಜಯಕುಮಾರ್ ಪಾಟೀಲ್ ವಾದ ಮಂಡಿಸಿದರು.
ರಾಜ್ಯ ಸರಕಾರಕ್ಕೆ ಜಾತಿ ಗಣತಿ ನಡೆಸುವುದಕ್ಕೆ ಅಧಿಕಾರ ಇಲ್ಲ. ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರ ಇರುವುದರಿಂದ ಸಂವಿಧಾನದ 354ನೇ ವಿಧಿಯ ಪ್ರಕಾರ ರಾಜ್ಯ ಸರಕಾರದ ಗಣತಿಗೆ ತಡೆ ನೀಡಬೇಕು. ಈ ಹಿಂದೆ 2023ರಲ್ಲಿ ರಾಜ್ಯ ಸರಕಾರ ಜಾತಿ ಸಮೀಕ್ಷೆ ನಡೆಸಿ ಸದನದ ಮುಂದಿಟ್ಟಿತ್ತು. ಆದರೆ ಅದರ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರದೆ ಈಗ ಮತ್ತೊಮ್ಮೆ ಜಾತಿ ಗಣತಿ ನಡೆಸುತ್ತಿದ್ದು ನಾಗರಿಕರ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಲಾಗುತ್ತಿದೆ ಎಂದು ಪ್ರಭುಲಿಂಗ ನಾವದಗಿ ಆಕ್ಷೇಪಿಸಿದರು.
ರಾಜ್ಯ ಸರಕಾರ ಹೊಸ ಜಾತಿಗಳನ್ನು ಸೃಷ್ಟಿಸಲು ನೋಡುತ್ತಿದೆ. ಇದಕ್ಕೆ ಅವಕಾಶ ಇಲ್ಲ. ಅಲ್ಲದೆ, ಹಿಂದುಳಿದ ವರ್ಗಕ್ಕೆ ನಿರ್ದಿಷ್ಟ ಜಾತಿಯನ್ನು ಸೇರಿಸಲು ಅಧ್ಯಯನ ಕೈಗೊಳ್ಳಬಹುದು ವಿನಾ ರಾಜ್ಯ ಸರಕಾರ ಜಾತಿ ಗಣತಿ ನಡೆಸುವಂತಿಲ್ಲ ಎಂದು ಒಕ್ಕಲಿಗರ ಸಂಘದ ಪರವಾಗಿ ಹಾಜರಾಗಿದ್ದ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು.
ಇದಕ್ಕೆ ಆಕ್ಷೇಪಿಸುತ್ತ ಸರಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯ ಸರಕಾರ ನಡೆಸುತ್ತಿರುವುದು ಸಮೀಕ್ಷೆ ಮಾತ್ರ, ಜಾತಿ ಗಣತಿ ಅಲ್ಲ. 2014ರಲ್ಲಿ ಸಮೀಕ್ಷೆ ಆರಂಭಿಸಿ 2016ರಲ್ಲಿ ಕೆಲಸ ಮುಗಿಸಿ 2024ರಲ್ಲಿ ವರದಿ ನೀಡಿತ್ತು. ಹಿಂದಿನ ದತ್ತಾಂಶಗಳನ್ನು ಅಪ್ಡೇಟ್ ಮಾಡಲಷ್ಟೇ ಹೆಚ್ಚುವರಿ ಸಮೀಕ್ಷೆ ಮಾಡಲಾಗುತ್ತಿದೆ. ಈಗಾಗಲೇ ಸಮೀಕ್ಷೆ ಆರಂಭವಾಗಿದ್ದು, ಇದರ ನಡುವೆ ಪೀಠದ ಮುಂದೆ ಬಂದಿದ್ದಾರೆ ಎಂದರು. ಕೊನೆಗೆ, ಎರಡೂ ಕಡೆಯ ವಾದ ಆಲಿಸಿ ಲಿಖಿತ ವಾದಗಳನ್ನು ಸಲ್ಲಿಸುವಂತೆ ಹೇಳಿ ಮಂಗಳವಾರ 2.30ಕ್ಕೆ ವಿಚಾರಣೆ ಮುಂದೂಡಲಾಯಿತು.
The Karnataka High Court on Friday declined to grant an interim stay on the state government’s ongoing caste census process. The petitions had been filed by the Akhila Karnataka Brahmin Mahasabha and the Okkaliga Sangha, challenging the legality of the exercise.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm