ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲಿ ಲೀನ ; ಅಕ್ಷರ ಮಾಂತ್ರಿಕನಿಗೆ ಸಕಲ ಸರ್ಕಾರಿ ಗೌರವ, ಚಿತೆಗೆ ಅಗ್ನಿಸ್ಪರ್ಶ ಮಾಡಿದ ಲೇಖಕಿ ಸಹನಾ ವಿಜಯ ಕುಮಾರ್ ! 

26-09-25 07:39 pm       HK News Desk   ಕರ್ನಾಟಕ

ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಮೈಸೂರು, ಸೆ.26 : ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ ಕುಮಾರ್ ಉಪಸ್ಥಿತರಿದ್ದರು. ಅಂತಿಮ ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಲ್ಲಿಗೆ ಎಸ್.ಎಲ್ ಭೈರಪ್ಪ ಅವರ ದೇಹವು ಪಂಚಭೂತಗಳಲ್ಲಿ ಲೀನವಾಯಿತು.

ಸಾಹಿತಿ ಎಸ್‌.ಎಲ್‌ ಭೈರಪ್ಪ ಪಂಚಭೂತಗಳಲ್ಲಿ ಲೀನ

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು. ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ನಮನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದಿದ್ದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭೈರಪ್ಪನವರ ಪ್ರತಿಮೆ ಸ್ಥಾಪಿಸುವುದಾಗಿ ಹೇಳಿದ್ದರು. 

ಇದಕ್ಕು ಮುನ್ನ ತನ್ನ ಅಂತ್ಯ ಸಂಸ್ಕಾರದ ಬಗ್ಗೆ ಭೈರಪ್ಪನವರು ವಿಲ್ ಬರೆದಿದ್ದಾರೆಂದು ಸುದ್ದಿ ಹಬ್ಬಿತ್ತು.ಅದರಲ್ಲಿ ತನ್ನ ಅಂತ್ಯಸಂಸ್ಕಾರವನ್ನು ಮಕ್ಕಳು ಮಾಡುವುದು ಬೇಡ, ಲೇಖಕಿ ಸಹನಾ ವಿಜಯಕುಮಾರ್ ಮಾಡಬೇಕು ಎಂದು ಬರೆದಿಡಲಾಗಿತ್ತು. ಈ ವಿಲ್ ಪ್ರತಿ ಜಾಲತಾಣದಲ್ಲಿ ಪ್ರಚಾರ ಪಡೆದಿತ್ತು. ‌ಅವರ ಕೋರಿಕೆಯಂತೆ ಇಂದು ಇಬ್ಬರು ಪುತ್ರರ ಜೊತೆಗೆ ಸಹನಾ ಅವರೇ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.

Renowned Kannada novelist Dr. S.L. Bhyrappa was cremated with full state honours on Friday afternoon at Rudrabhoomi, Chamundi Hill foothills, Mysuru. The final rites were performed at 12:30 PM in the presence of family members, dignitaries, and a large gathering of admirers.