ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm