ಬ್ರೇಕಿಂಗ್ ನ್ಯೂಸ್
30-09-25 04:00 pm HK News Desk ಕರ್ನಾಟಕ
ಹಾಸನ, ಸೆ 30 : ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಲೂರು ತಾಲೂಕಿನ ಹಳೆ ಆಲೂರಿನಲ್ಲಿ ನಡೆದಿದೆ. ಸುದರ್ಶನ್ ಆಚಾರ್ (32) ಹಾಗೂ ಪತ್ನಿ ಕಾವ್ಯ (27) ಗಂಭೀರವಾಗಿ ಗಾಯಗೊಂಡ ದಂಪತಿ.
ಆಲೂರು ಪಟ್ಟಣದ ಹೊರವಲಯದ ಹಳೆ ಆಲೂರಿನ ವಾಸದ ಮನೆಯಲ್ಲಿ ನಿನ್ನೆ ರಾತ್ರಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಮನೆಯ ಗೋಡೆ ಛಿದ್ರವಾಗಿದ್ದರೆ, ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ದಂಪತಿಯು ತಮ್ಮ ಇಬ್ಬರು ಮಕ್ಕಳ ಜೊತೆ ಮನೆಯಲ್ಲಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ತೀವ್ರವಾಗಿ ಗಾಯಗೊಂಡ ದಂಪತಿಯನ್ನು ಮೊದಲು ಆಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಬಳಿಕ ಅವರ ಸ್ಥಿತಿ ಗಂಭೀರವಾಗಿರುವುದರಿಂದ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಪೊಲೀಸ್ ತನಿಖೆ:
ಸ್ಫೋಟದ ಕಾರಣ ಇನ್ನೂ ಪತ್ತೆಯಾಗಿಲ್ಲ. ಇದು ಗ್ಯಾಸ್ ಸೋರಿಕೆ ಪರಿಣಾಮವೇ ಅಥವಾ ಬೇರೆ ಯಾವುದೋ ಕಾರಣದಿಂದ ಸಂಭವಿಸಿರುವುದೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಆಕಸ್ಮಿಕ ಸ್ಫೋಟದಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದಂಪತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಶಿವಮೊಗ್ಗದಲ್ಲಿರುವ ಸಂಬಂಧಿಕರು ಹಾಸನಕ್ಕೆ ಆಗಮಿಸುತ್ತಿದ್ದು, ಅವರು ಬಂದ ಬಳಿಕ ಸ್ಪಷ್ಟ ಚಿತ್ರಣ ತಿಳಿಯಲಿದೆ.
ಕಳೆದ ಮೂರು ದಿನಗಳ ಹಿಂದೆಯಷ್ಟೇ ವಿಜಯನಗರದ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಪರಿಣಾಮ ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿರುವ ಘಟನೆ ನಡೆದಿತ್ತು. ಸ್ಫೋಟಕ್ಕೆ ಮನೆ ಕುಸಿದು ಬಿದ್ದಿದ್ದು, ಮನೆಯ ಯಜಮಾನಿ ಕವಿತಾ ಗಂಭೀರವಾಗಿ ಗಾಯಗೊಂಡಿದ್ದರೆ, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದು. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಗ್ಗೆ ಸ್ಟವ್ ಉರಿಸಲು ಕವಿತಾ ಅವರು ಹೋದಾಗ ಏಕಾಏಕಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಮನೆ ಶೇ 60ರಷ್ಟು ಧ್ವಂಸವಾಗಿದೆ.
A mysterious explosion at a house in Hale Alur, Alur taluk of Hassan district, left a couple—Sudharshan Achar (32) and his wife Kavya (27)—critically injured, while their two children escaped unhurt. The blast ripped through the house, damaging walls and household items, creating panic among locals.
30-09-25 04:00 pm
HK News Desk
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
ನಮ್ಮ ಸರ್ಕಾರ ಬಂದ್ರೆ ಕಮಿಷನ್ ತೆಗೆದುಕೊಳ್ಳಲ್ಲ ಎಂದ...
29-09-25 02:49 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
29-09-25 11:02 pm
Mangalore Correspondent
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm