ಬ್ರೇಕಿಂಗ್ ನ್ಯೂಸ್
07-10-25 07:32 pm Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಬಿಕ್ ಶಾಕ್ ಎದುರಾಗಿದೆ. ನಿಯಮ ಉಲ್ಲಂಘನೆ ಆರೋಪದ ಮೇಲೆ ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ನಿರ್ಮಿಸಲಾಗಿದ್ದ ಜಾಲಿವುಡ್ ಸ್ಟುಡಿಯೋಸ್‌ನ ಕಟ್ಟಡಕ್ಕೆ ಬೀಗ ಹಾಕಲಾಗಿದೆ. ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಶೋ ಇದೇ ಸ್ಟುಡಿಯೋದಲ್ಲಿ ನಡೆಯಿತ್ತಿತ್ತು. ಆದರೆ ಇದೀಗ ಸ್ಟುಡಿಯೋವನ್ನು ಸೀಲ್ ಮಾಡಿರೋದ್ರಿಂದ ಬಿಗ್ ಬಾಸ್ ಶೋಗೆ ಬಿಗ್ ಶಾಕ್ ಎದುರಾದಂತಾಗಿದೆ.
ಬಿಗ್ ಬಾಸ್ ನಡೆಯುತ್ತಿದ್ದ ಸ್ಟುಡಿಯೋಗೆ ಬೀಗ;
ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನಡೆಯುತ್ತಿದ್ದ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಜಾಲಿವುಡ್ ಸ್ಟುಡಿಯೋದೊಳಗೆ ಬಿಗ್ ಬಾಸ್ ಶೋ ನಡೆಯುತ್ತಿತ್ತು. ಆದರೆ ಜಾಲಿವುಡ್ ಸ್ಟುಡಿಯೋಸ್ ಅವರು ನಿಯಮ ಉಲ್ಲಂಘನೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ ರಾಮನಗರ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ಬೀಗ ಹಾಕಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್‌ಗೆ ಉತ್ತರ ಕೊಡದ ಹಿನ್ನೆಲೆಯಲ್ಲಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ.




ವೇಲ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆಗೆ ನೋಟಿಸ್ ನೀಡಲಾಗಿತ್ತು. ವೇಲ್ಸ್ ಎಂಟರ್ಟೈನ್ಮೆಂಟ್ ಪ್ರೈ. ಲಿ ಸಂಸ್ಥೆಯ ಸ್ಟುಡಿಯೋದಲ್ಲಿ ಬಿಗ್ ಬಾಸ್ ಸೆಟ್ ಹಾಕಲಾಗಿದ್ದು, ಜಾಲಿವುಡ್ ಸ್ಟುಡಿಯೋಸ್ ಹಾಗೂ ಬಿಗ್ ಬಾಸ್ ಮನೆ ಇರುವ ಜಾಗದಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ನೋಟಿಸ್ ನೀಡಲಾಗಿತ್ತು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ನೋಟಿಸ್ ನೀಡಿತ್ತು. ತ್ಯಾಜ್ಯ ವಿಲೇವಾರಿ ಹಾಗೂ STP ನೀರು ಸೂಕ್ತ ನಿರ್ವಹಣೆ ಆಗ್ತಿಲ್ಲ ಎಂದು ಉಲ್ಲೇಖಿಸಲಾಗಿತ್ತು. ಈ ಸಂಬಂಧ ರಾಮನಗರ ಡಿಸಿ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ KSPCB ಈ ಮೊದಲೇ ಎಚ್ಚರಿಸಿತ್ತು. ನೀರು ಹಾಗೂ ಕರೆಂಟ್ ಕಟ್ ಮಾಡುವಂತೆ ಒಂದು ತಿಂಗಳ ಹಿಂದೆಯೇ ಸೂಚನೆ ನೀಡಲಾಗಿತ್ತು. ಆದಾಗ್ಯೂ ವೇಲ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ಇದೀಗ ಬಂದ್ ಮಾಡಿ ಸ್ಪಷ್ಟನೆ ನೀಡುವಂತೆ ಖುದ್ದು KSPCBಯಿಂದ ನೋಟೀಸ್ ನೀಡಲಾಗಿದೆ.
ನೋಟಿಸ್ ಬಗ್ಗೆ ಸಚಿವ ಖಂಡ್ರೆ ಹೇಳಿದ್ದೇನು?
ಒಂದು ತಿಂಗಳನಿಂದ ನಿರಂತರವಾಗಿ ಸೂಚನೆ ನೀಡಿದ್ದರೂ ವೇಲ್ಸ್ ಎಂಟರ್ಟೈನ್ಮೆಂಟ್ ನಿರ್ಲಕ್ಷ್ಯ ತೋರಿದ್ದು, ಹೀಗಾಗಿ ಬಂದ್ ಮಾಡುವಂತೆ ಖಡಕ್ ನೋಟೀಸ್‌ನಲ್ಲಿ ಸೂಚನೆ ನೀಡಲಾಗಿದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಸ್ಟೂಡಿಯೋಗೆ ರಾಮನಗರ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಹಿಂದೆಯೇ, ಅಂದರೆ ಮಾರ್ಚ್ 2024ರಲ್ಲಿಯೇ ನೋಟೀಸ್ ಕೊಟ್ಟಿದ್ದಾರೆ. ಪರಿಶೀಲನೆ ಕೂಡ ಮಾಡಿದಾಗ ವಾಟರ್ ಆ್ಯಕ್ಟ್, ಏರ್ ಆ್ಯಕ್ಟ್ ಪರವಾನಗಿ ಪಡೆದಿಲ್ಲ ಎಂಬುದು ನಮಗೆ ಬಂದಿದೆ ಎಂದಿದ್ದರು.
The popular Kannada reality show Bigg Boss, hosted by Kiccha Sudeep, has been hit with a major setback after the government sealed the Jollywood Studios in Bidadi, Bengaluru South district, where the show was being filmed. The studio was shut down following allegations of environmental and regulatory violations.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm