ಬ್ರೇಕಿಂಗ್ ನ್ಯೂಸ್
11-10-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.11 : ಯಾವ ಸಂಪುಟ ವಿಸ್ತರಣೆಯೂ ಇಲ್ಲ. ಎಲ್ಲ ಗಾಳಿ ಸುದ್ದಿ. ಅದೆಲ್ಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಮುಖ್ಯಮಂತ್ರಿ ಅಥವಾ ನಾನು ಪ್ರಸ್ತಾಪ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲ ಎಂದಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಏನೋ ಮಾತನಾಡುತ್ತಾರೆ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನಂತೂ ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
'ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ಸುದ್ದಿ ತಿರುಚುವುದಾದರೆ, ನಾನು, ನಿಮಗೆ (ಮಾಧ್ಯಮ) ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ ಎಂದು ಹೇಳುವ ಅಗತ್ಯ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೊ ಕೊಡಲಿ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ' ಎಂದರು.
ಹೈಕಮಾಂಡ್ ಹೇಳಿದರೆ ಅಧಿಕೃತ
'ಅಧಿಕಾರ ಹಂಚಿಕೆ ಸಂಪುಟ ಪುನರ್ ರಚನೆ ಬಗ್ಗೆ ಹಾದಿಬೀದಿ ಮಾತುಗಳಿಗೆ ಮಾನ್ಯತೆ ಇಲ್ಲ. ಈ ಕುರಿತು ಹೈಕಮಾಂಡ್ ನಾಯಕರು ಹೇಳಿದರೆ ಮಾತ್ರ ಅಧಿಕೃತ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು 'ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಬೇಕು. ಅವರು ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತಾರೆ. ಬಹಿರಂಗ ಹೇಳಿಕೆ ನೀಡುವವರಿಗೆ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
Deputy Chief Minister D.K. Shivakumar has dismissed reports of a cabinet expansion in Karnataka, calling them “baseless and media-created rumours.” Speaking to reporters in Bengaluru, he asserted that neither he nor Chief Minister Siddaramaiah had discussed any such move.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am