ಬ್ರೇಕಿಂಗ್ ನ್ಯೂಸ್
15-10-25 03:32 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ಜೊತೆಗೆ ರಘು ದೀಕ್ಷಿತ್ ಇದೇ ತಿಂಗಳ ಕೊನೆಯಲ್ಲಿ ವಿವಾಹ ಆಗಲಿದ್ದಾರೆ.
ಬಹು ಭಾಷೆಗಳಲ್ಲಿ ಜಾನಪದ ಸಂಗೀತಕ್ಕೆ ಹೆಸರು ಪಡೆದಿರುವ ಗಾಯಕ ರಘು ದೀಕ್ಷಿತ್ ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ್ತಿ, ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರೊಂದಿಗೆ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಮುಂದಾಗಿದ್ದಾರೆ. ಇವರ ಪ್ರೀತಿ ಪ್ರಣಯ 'ಸಾಕು ಇನ್ನೂ ಸಾಕು' ಎನ್ನುವ ಸಂಗೀತ ಆಲ್ಬಮ್ ಸಹಯೋಗದಲ್ಲಿ ಪ್ರಾರಂಭವಾಗಿತ್ತು. ಒಡನಾಟದ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಇದೆಲ್ಲಾ ಆಕಸ್ಮಿಕವಾಗಿ ಹುಟ್ಟಿಕೊಂಡಿತು. ವಾರಿಜಾಶ್ರೀ ಅವರ ಪೋಷಕರ ಆಶೀರ್ವಾದದೊಂದಿಗೆ, ಜೀವನದ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸಲು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಅವರು ಸಾಕಷ್ಟು ವಿಡಿಯೊ ಸಾಂಗ್ ಆಲ್ಬಂಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅವರು ಹಾಡಿದ್ದ 'ಭರವಸೆಯ ಬದುಕು' ವಿಡಿಯೋ ಸಾಂಗ್ ಬದುಕಿನಲ್ಲಿ ಸಾಕಷ್ಟು ನೋವುಂಡವರಿಗೆ ಆತ್ಮವಿಶ್ವಾಸ ತುಂಬಿತ್ತು. ಖ್ಯಾತ ನೃತ್ಯ ಕಲಾವಿದೆ ಮಯೂರಿ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದ ರಘು ದೀಕ್ಷಿತ್ 2019ರಲ್ಲಿ ಭಿನ್ನಾಭಿಪ್ರಾಯದಿಂದಾಗಿ ವಿಚ್ಛೇದನ ಪಡೆದಿದ್ದರು.
Renowned musician Raghu Dixit is all set to tie the knot again at the age of 50. He will marry Grammy-nominated singer and flautist Varijashree Venugopal later this month. Their bond began during the making of the music album “Saaku Innu Saaku” and gradually blossomed into love.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am