ಬ್ರೇಕಿಂಗ್ ನ್ಯೂಸ್
15-10-25 03:35 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೇ ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ - ಬೆಂಗಳೂರು- ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್ ಸಂಚಾರ ನಡೆಸಲಿದೆ.
ಹುಬ್ಬಳ್ಳಿ ಮಂಗಳೂರು ವಿಶೇಷ ರೈಲು ವೇಳಾಪಟ್ಟಿ
ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಮತ್ತು ಬಂಟವಾಳ, ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ.
ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು ಮಧ್ಯಾಹ್ನ 2:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಯಶವಂತಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19 ರಂದು ಮಧ್ಯರಾತ್ರಿ 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್- ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ಎರಡು ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ರೈಲು ಸಂಖ್ಯೆ 06507 ಬೆಳಗಾವಿ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 19:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06508, ಅಕ್ಟೋಬರ್ 18 ರಂದು 21:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 19 ರಂದು 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.
ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ: 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.
To manage the festive rush during Diwali, the South Western Railway has announced special train services connecting Mangaluru, Bengaluru, Hubballi, and Belagavi. The temporary express trains will operate between October 17 and 19, providing additional travel options for passengers.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm