ಬ್ರೇಕಿಂಗ್ ನ್ಯೂಸ್
15-10-25 10:59 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ. ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ ಏಷ್ಯನ್ ಡೆವೆಲಪ್‍ಮೆಂಟ್ ಬ್ಯಾಂಕ್(ಎಡಿಬಿ) ಸಹಯೋಗದೊಂದಿಗೆ ರಾಜ್ಯ ಸರಕಾರದ ವತಿಯಿಂದ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು ಎಂದರು.
ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನಿಧಿಯ ಮೂಲಕ 200 ಶಾಲೆಗಳನ್ನು, ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವತಿಯಿಂದ ಗಣಿ ಬಾಧಿತ 10 ತಾಲೂಕುಗಳಲ್ಲಿ 100 ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಲು ಪ್ರತ್ಯೇಕ ಯೋಜನಾ ವರದಿಯನ್ನು(ಡಿಪಿಆರ್) ತಯಾರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2 ರಿಂದ 3 ಕೆಪಿಎಸ್ ಶಾಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ತಾಲೂಕಿನಲ್ಲಿ 4 ರಿಂದ 5 ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರಾಥಮಿಕ, ಪ್ರೌಡ ಮತ್ತು ಪಿಯುಸಿ ಎಂದು ನಮ್ಮ ಇಲಾಖೆಯಲ್ಲಿ ವಿಭಾಗಿಸಲಾಗಿದೆ. ಇದನ್ನೆಲ್ಲ ಒಟ್ಟುಗೂಡಿಸಿ, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಲಾಗುವುದು. ಈ ಯೋಜನೆಯು ರಾಜ್ಯದಲ್ಲಿನ ಸರಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡುವಂತೆ ಮಾಡುತ್ತದೆ ಎಂದು ಅವರು ತಿಳಿಸಿದರು.
ನ.1ರ ಕನ್ನಡ ರಾಜ್ಯೋತ್ಸವದಂದು ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳ ಡಿಜಿಟಲ್ ಅವತರಣಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ. ಹಾಗೆಯೇ ವಿದ್ಯಾರ್ಥಿ ಚಟುವಟಿಕಾ ಪುಸ್ತಕಗಳನ್ನು ಮುದ್ರಿಸಿ ಪ್ರತಿ ವಿದ್ಯಾರ್ಥಿಗೆ ಒಂದು ಚಟುವಟಿಕಾ ಪುಸ್ತಕದಂತೆ ಶಾಲೆಗಳಿಗೆ ಸರಬರಾಜು ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
The Karnataka government has announced plans to convert 800 government schools into Karnataka Public Schools (KPS), each developed at an estimated cost of ₹4 crore, School Education and Literacy Minister S. Madhu Bangarappa said in Bengaluru.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm