ಬ್ರೇಕಿಂಗ್ ನ್ಯೂಸ್
16-10-25 04:44 pm HK News Desk ಕರ್ನಾಟಕ
ಮೈಸೂರು, ಅ.16 : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ. ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತೆ ಎನ್ನುವುದು ನಮ್ಮ ನಂಬಿಕೆ. ಹೀಗಾಗಿ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಯಾವುದೇ ಕ್ರಾಂತಿ ಬಗ್ಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ, ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು. ಎಲ್ಲರ ಬೆಂಬಲ ಇರೋದ್ರಿಂದಲೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ. ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ ಎಂದೂ ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ನವೆಂಬರ್ ವೇಳೆಗೆ ಪೂರ್ತಿಯಾಗುವುದರಿಂದ ಸ್ಥಾನ ಬಿಟ್ಟು ಕೊಡಲಿದ್ದಾರೆ, ಡಿಕೆಶಿ ಸಿಎಂ ಆಗುತ್ತಾರೆಂಬ ವದಂತಿ ಇದೆ. ಇದರ ಬಗ್ಗೆ ಡಿಕೆಶಿ ಬೆಂಬಲಿಗರು ಹೇಳುತ್ತಿದ್ದರೆ, ಸಿದ್ದರಾಮಯ್ಯ ಪರ ಇರುವವರು ಹಾಗೇನೂ ಇಲ್ಲ ಎಂದು ಹೇಳುತ್ತಿದ್ದಾರೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm