ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ್ ; ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ, ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸುವಂತಿಲ್ಲ! ಹೆಸರೆತ್ತದೆ 'ಸಂಘ ದಕ್ಷ'ಕ್ಕೆ ಅಂಕುಶ 

16-10-25 09:04 pm       Bangalore Correspondent   ಕರ್ನಾಟಕ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರದ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳು ಯಾವುದೇ ಚಟುವಟಿಕೆ ನಡೆಸೋದಕ್ಕು ಪೂರ್ವಾನುಮತಿ ಕಡ್ಡಾಯಗೊಳಿಸಿ ಹೊಸ ನೀತಿ ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. 

ಬೆಂಗಳೂರು, ಅ.16 : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರದ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳು ಯಾವುದೇ ಚಟುವಟಿಕೆ ನಡೆಸೋದಕ್ಕು ಪೂರ್ವಾನುಮತಿ ಕಡ್ಡಾಯಗೊಳಿಸಿ ಹೊಸ ನೀತಿ ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. 

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಇಂದು) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಎಲ್ಲ ರೀತಿಯ ಸಂಘ- ಸಂಸ್ಥೆಗಳ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದೆ. ತಮಿಳುನಾಡು ಸರ್ಕಾರ ಕೈಗೊಂಡಿರುವ ಕ್ರಮದ ರೀತಿಯಲ್ಲೇ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಚಟುವಟಿಕೆ ನಡೆಸುವುದಕ್ಕೂ ಪೂರ್ವಾನುಮತಿ ಕಡ್ಡಾಯಗೊಳಿಸಿ ಹೊಸ ನಿಯಮ ತರುವುದಕ್ಕೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರ ಟೀಕೆ ಹಿನ್ನೆಲೆಯಲ್ಲಿ ಹೊಸ ನಿಯಮದಲ್ಲಿ ಆರೆಸ್ಸೆಸ್‌ ಪದ ಬಳಕೆ ಮಾಡದೆ ಅದರ ಚಟುವಟಿಕೆ ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ಮುಂದಡಿ ಇಟ್ಟಿದೆ.

ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್‌ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ತಮ್ಮ ಯಾವುದೇ ರೀತಿಯ ಚಟುವಟಿಕೆ ನಡೆಸುವುದಕ್ಕೂ ಅಂಕುಶ ಬೀಳಲಿದೆ. ಯಾವುದೇ ಕಾರ್ಯಕ್ರಮ ಏರ್ಪಡಿಸುವುದಾದರೂ ಸ್ಥಳೀಯ ಪೊಲೀಸ್ ಠಾಣೆ ಅಥವಾ ಸಕ್ಷಮ ಪ್ರಾಧಿಕಾರದಲ್ಲಿ ಅನುಮತಿ ಪಡೆಯಬೇಕಾಗುತ್ತದೆ. 

ಸಂಪುಟ ಸಭೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನ ಮಾಡಲು ಅನುಮತಿ ಪಡೆಯಬೇಕು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಯಾವುದೇ ಸಂಘಟನೆಗಳು ಕಾರ್ಯಕ್ರಮಕ್ಕೆ ಮುನ್ನ ಅನುಮತಿ ಪಡೆಯಬೇಕು. ಈ ಕುರಿತು ಹೊಸ ನಿಯಮಗಳನ್ನು ಕಾನೂನು ರೀತ್ಯ ಜಾರಿಗೆ ತರಲಾಗುವುದು. ಕಾನೂನು ಎಲ್ಲರಿಗೂ ಒಂದೇ ಆಗಿರಲಿದ್ದು ಅನುಮತಿ ಪಡೆದು ಕಾರ್ಯಕ್ರಮ ನಡೆಸಲು ತೊಂದರೆ ಇರುವುದಿಲ್ಲ. ಕಾನೂನು ತೊಂದರೆ ಇಲ್ಲ ಎನಿಸಿದರೆ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ಕೊಡುತ್ತಾರೆ ಎಂದರು.

ಶಾಲೆ, ಸರ್ಕಾರಿ ಜಾಗ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಚಟುವಟಿಕೆಗೂ ಅವಕಾಶ ಇಲ್ಲ. ಹಿಂದಿನ ಕೆಲವು ಅದೇಶಗಳನ್ನ ಕ್ರೋಢೀಕರಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸಂಘ ಸಂಸ್ಥೆಗಳ ಚಟುವಟಿಕೆ ನಿಯಂತ್ರಿಸುವುದು ಸಾಧ್ಯವಿಲ್ಲ. ಆದರೆ ಸರ್ಕಾರದ ಜಾಗದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ನೀಡುವುದಿಲ್ಲ. ಲಾಠಿ ಬೀಸುವುದು, ಪಥ ಸಂಚಲನ ಹೋಗುವುದು, ಘೋಷಣೆ ಕೂಗುವುದು ಇತ್ಯಾದಿ ಕಾನೂನು ಪ್ರಕಾರ ಸಾಧ್ಯವಿಲ್ಲ ಎಂದು ಹೇಳಿದರು.

The Karnataka Cabinet, led by Chief Minister Siddaramaiah, has decided to impose restrictions on RSS and other private organizations conducting activities in government spaces. The decision follows Minister Priyank Kharge’s recommendation to regulate such events.