ಬ್ರೇಕಿಂಗ್ ನ್ಯೂಸ್
17-10-25 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅ.17 : ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಹೊಸ ಸವಾಲು ಮುಂದಿಟ್ಟಿದ್ದಾರೆ. ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸರ್ಕಾರದ ಅನುಮತಿಯಿಲ್ಲದೆ, ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಕಟ್ಟಡದ ಆವರಣಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎನ್ನುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗಿದ್ದು ಈ ಬಗ್ಗೆ ಶೀಘ್ರದಲ್ಲೇ ನಿಯಮ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಯತ್ನಾಳ್ ಅವರು, ಆರೆಸ್ಸೆಸ್ ಚಟುವಟಿಕೆ ನಿಗ್ರಹಿಸುವ ಸರ್ಕಾರದ ಕ್ರಮಕ್ಕೆ ಕೌಂಟರ್ ಎನ್ನುವಂತೆ ನಮಾಜ್ ನಿಷೇಧಿಸಲು ಒತ್ತಾಯ ಮಾಡಿದ್ದಾರೆ.
ಯಾವುದೇ ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಮಾಡುತ್ತಿರುವ ದೃಶ್ಯಗಳು ಕಂಡುಬರುತ್ತವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರಿ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ ಮಾಡಲು ಅನುಮತಿ ನೀಡಬಾರದು ಎಂದು ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.
ಪೂರ್ವ ಅನುಮತಿಯಿಲ್ಲದೆ ರಸ್ತೆಯಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅಥವಾ ಸರ್ಕಾರಿ ಆವರಣದಲ್ಲಿ ನಮಾಜ್ ಮಾಡದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಯತ್ನಾಳ್ ಮನವಿ ಮಾಡಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮ ನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.
In response to the Karnataka government’s move to curb RSS activities in public spaces, Vijayapura MLA Basanagouda Patil Yatnal has written a letter to Chief Minister Siddaramaiah, demanding a ban on Namaz in public places without prior permission.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am