ಬ್ರೇಕಿಂಗ್ ನ್ಯೂಸ್
24-10-25 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.24 : ಭಾರೀ ಕುತೂಹಲ ಮೂಡಿಸಿದ್ದ ಧರ್ಮಸ್ಥಳದಲ್ಲಿ ಹೆಣ ಹೂತಿಟ್ಟ ಪ್ರಕರಣದ ತನಿಖಾ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರಕಾರ ಸೂಚನೆ ನೀಡಿದೆ.
ಸರಕಾರದ ಸೂಚನೆ ಆಧರಿಸಿ ಮುಂದಿನ ವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಎಸ್‌ಐಟಿ ತಯಾರಿ ನಡೆಸಿದೆ. ಹೀಗಾಗಿ ಇದೇ ತಿಂಗಳ ಅಂತ್ಯದೊಳಗೆ ದೇಶಾದ್ಯಂತ ಸುದ್ದಿಯಾಗಿದ್ದ ಧರ್ಮಸ್ಥಳ ಪ್ರಕರಣದ ತನಿಖಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಧರ್ಮಸ್ಥಳ ಕ್ಷೇತ್ರದಲ್ಲಿ ಅಸಹಜ ಸಾವಾಗಿದೆ, ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಆರೋಪದ ಕುರಿತಂತೆ ದೂರುದಾರರ ಮನವಿ ಆಧರಿಸಿ ರಾಜ್ಯ ಸರಕಾರ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು. ಎಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನುರಿತ ಅಧಿಕಾರಿಗಳನ್ನು ಒಳಗೊಂಡ ತಂಡ ನೇಮಿಸಲಾಗಿತ್ತು. ದೂರುದಾರ ಚಿನ್ನಯ್ಯ ತೋರಿಸಿದ ಜಾಗದಲ್ಲಿ 15ಕ್ಕೂ ಹೆಚ್ಚು ಕಡೆ ಅಗೆದು ಶವ ಶೋಧ ನಡೆಸಲಾಗಿತ್ತು. ಆದರೆ ಹೇಳಿಕೊಂಡ ರೀತಿಯಲ್ಲಿ ಸಾಕ್ಷ್ಯ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ದೂರುದಾರ ಮತ್ತು ಜೊತೆಗಿದ್ದವರನ್ನು ಪಿತೂರಿದಾರರು ಎಂದು ತೋರಿಸಿ ಪ್ರತ್ಯೇಕ ಎಫ್ಐಆರ್ ಮಾಡಲಾಗಿತ್ತು. ಆನಂತರ ಚಿನ್ನಯ್ಯ ಕೋರ್ಟಿಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದು, ಪಿತೂರಿ ಬಗ್ಗೆಯೂ ಹೇಳಿಕೆ ನೀಡಿದ್ದಾನೆ ಎನ್ನಲಾಗಿತ್ತು. ಆತನ ಪತ್ನಿ, ಸೋದರಿಯನ್ನೂ ತನಿಖಾ ತಂಡ ವಿಚಾರಣೆ ನಡೆಸಿತ್ತು.
ಸದ್ಯಕ್ಕೆ ಮೂರು ತಿಂಗಳಿನಿಂದ ನಡೆದ ತನಿಖೆ ಹಾಗೂ ಸಾಕ್ಷ್ಯಗಳ ಸಂಗ್ರಹ ಕಾರ್ಯ ಬಹುತೇಕ ಅಂತಿಮಗೊಂಡಿದೆ ಎನ್ನಲಾಗುತ್ತಿದ್ದು ತನಿಖೆಯನ್ನು ಕೊನೆಗೊಳಿಸುವ ಬಗ್ಗೆ ಮಾತು ಕೇಳಿಬಂದಿತ್ತು. ಆದರೆ ಹಳೆ ಪ್ರಕರಣಗಳನ್ನು ತನಿಖೆ ನಡೆಸಬೇಕು ಎನ್ನುವ ಆಗ್ರಹದ ಬಗ್ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲ ಎನ್ನಲಾಗಿದೆ. ಈವರೆಗಿನ ತನಿಖಾ ಪ್ರಕ್ರಿಯೆ ಬಗ್ಗೆ ಎಸ್ಐಟಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಇದರ ನಡುವೆಯೇ ದೇಶ- ವಿದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಕರಣದ ತನಿಖೆಯನ್ನು ತುರ್ತಾಗಿ ಮುಗಿಸುವಂತೆ ಸರ್ಕಾರದ ಕಡೆಯಿಂದ ಸೂಚನೆ ನೀಡಿರುವುದು ಕುತೂಹಲಕ್ಕೀಡು ಮಾಡಿದೆ.
The Karnataka government has directed the Special Investigation Team (SIT) to complete the probe into the sensational Dharmasthala buried-body case by the end of this month. Acting on the directive, the SIT—headed by ADGP Pranav Mohanty—is preparing to submit its final report to the court next week.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm