ಬ್ರೇಕಿಂಗ್ ನ್ಯೂಸ್
25-10-25 09:04 pm Bangalore Correspondent ಕರ್ನಾಟಕ
ಬೆಂಗಳೂರು, ಅ 25 : ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ಹಾಗೂ ಸಾರ್ವಜನಿಕರೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.
ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ಉತ್ತಮ ಅಭಿಪ್ರಾಯ ಮೂಡಬೇಕು. ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಹಾಗೂ ಘನತೆ ಕಾಣಬೇಕು ಎಂಬ ಉದ್ದೇಶದಿಂದ ಡಿಜಿ-ಐಜಿಪಿ ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.
ಮಾರ್ಗಸೂಚಿಯಲ್ಲಿರುವ ಅಂಶಗಳೇನು?:
ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಹಿನ್ನೆಲೆಯನ್ನು ಗಮನಿಸದೇ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು. ಸಾರ್ವಜನಿಕರ ಕುಂದುಕೊರತೆ ತಾಳ್ಮೆಯಿಂದ ಆಲಿಸಿ ವಿಳಂಬ ನೀತಿ ಅನುಸರಿಸದೇ ದೂರು ದಾಖಲಿಸಬೇಕು.
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು. ಕರ್ತವ್ಯದ ವೇಳೆ ಅಥವಾ ಮುಗಿದ ಬಳಿಕ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ ನಿಯಮಗಳನ್ನು ಎತ್ತಿಹಿಡಿಯಬೇಕು.
ತನಿಖಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ಪ್ರತಿ ಹಂತದಲ್ಲೂ ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ನಾಗರಿಕರಿಗೆ ಅನಗತ್ಯವಾಗಿ ತೊಂದರೆ ನೀಡಬಾರದು.
ಸಂತ್ರಸ್ತರು, ಮಹಿಳೆಯರು, ಹಿರಿಯ ನಾಗರಿಕರು ಮತ್ತು ಮಕ್ಕಳೊಂದಿಗೆ ವಿಶೇಷ ಕಾಳಜಿಯಿಂದ ಮತ್ತು ಸೂಕ್ಷತೆಯಿಂದ ವರ್ತಿಸಬೇಕು. ಸಾರ್ವಜನಿಕರ ದೂರುಗಳ ಸ್ಥಿತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ನಾಗರಿಕರಿಗೆ ಮಾಹಿತಿ ನೀಡಬೇಕು. ಕರ್ತವ್ಯಕ್ಕೆ ಹಾಜರಾಗುವುದು ಮತ್ತು ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತಿನಿಂದ ಸಮಯ ಪಾಲನೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು. ಸಾರ್ವಜನಿಕರ ಖಾಸಗಿತನ ಮತ್ತು ಘನತೆ ಗೌರವಿಸಿ, ಅಧಿಕಾರದ ದುರುಪಯೋಗ ಅಥವಾ ದೌರ್ಜನ್ಯದಿಂದ ದೂರವಿರಬೇಕು.
ಮಹಿಳೆಯರನ್ನು ಸಂಜೆ 6 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆಯನ್ನು ನೀಡಲು ಕರೆತರಬಾರದು. ಮಹಿಳೆಯು ಒಂದು ವೇಳೆ ಆರೋಪಿಯಾಗಿದ್ದಲ್ಲಿ ಅಥವಾ ಸಂತ್ರಸ್ತೆಯಾಗಿದ್ದಲ್ಲಿ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೆರವಿನೊಂದಿಗೆ, ಮಹಿಳೆಯ ವಾಸದ ಸ್ಥಳ/ಮನೆಯಲ್ಲಿಯೇ ವಿಚಾರಣೆ ಮಾಡಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಮಹಿಳೆಯರು ಭಾಗಿಯಾದಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅವರಿಗೆ ಯಾವುದೇ ಅವಮಾನಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು ಮತ್ತು ಅವರನ್ನು ಪೊಲೀಸ್ ಠಾಣೆಯಲ್ಲಿ ಇರಿಸಬಾರದು. ಬದಲಿಗೆ ಅವರನ್ನು ರಾಜ್ಯ ಗೃಹ (ಸ್ಟೇಟ್ ಹೋಮ್) ಆಶ್ರಯ ತಾಣಗಳಲ್ಲಿ ಇರಿಸಬೇಕು ಸಲೀಂ ಅವರು ತಿಳಿಸಿದ್ಧಾರೆ.
In a move to build a citizen-friendly police environment, Karnataka’s Director General of Police (DGP) Dr. M.A. Saleem has issued a comprehensive set of guidelines on police conduct, emphasizing politeness, transparency, and ethical behavior.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm