ಬ್ರೇಕಿಂಗ್ ನ್ಯೂಸ್
03-11-25 05:17 pm Bangalore Correspondent ಕರ್ನಾಟಕ
ಬೆಂಗಳೂರು, ನ.3 : ನಾಯಕತ್ವ ಬದಲಾವಣೆ ಕುರಿತ ಸದ್ದಿನ ನಡುವಲ್ಲೇ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ನವದೆಹಲಿಗೆ ತೆರೆಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಮೂರು ದಿನ ತಂಗಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದು, ದೆಹಲಿ ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ನವೆಂಬರ್ 11ರಂದು ದೆಹಲಿ ಭೇಟಿ ನೀಡಲಿದ್ದು, ಅದಕ್ಕೂ ಮೊದಲೇ ಸತೀಶ್ ದೆಹಲಿಗೆ ಭೇಟಿ ನೀಡಿ ಅಹವಾಲು ಮಂಡಿಸಲಿದ್ದಾರೆ.
ಹೈಕಮಾಂಡ್ ಕೆಪಿಸಿಸಿ ಹುದ್ದೆ ನೀಡಿದ್ದೇ ಆದರೆ, ಸತೀಶ್ ಅವರು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧರಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಈ ಸಂದೇಶವನ್ನು ಖರ್ಗೆಯವರಿಗೆ ತಲುಪಿಸಿದ್ದಾರೆ. ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಅವರ ಹೈಕಮಾಂಡ್ ನಾಯಕರೊಂದಿಗಿನ ಸಭೆ ಮಹತ್ವ ಪಡೆದುಕೊಂಡಿದೆ. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಸಂದೇಶವನ್ನು ಸತೀಶ್ ಹೈಕಮಾಂಡ್‌ಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಸತೀಶ್ ಜಾರಕಿಹೊಳಿಯವರ ದೆಹಲಿ ಭೇಟಿಯನ್ನು ರಾಜಕೀಯಗೊಳಿಸಬಾರದು. ರಾಜಕಾರಣಿಗಳು ಅನೇಕ ಕಾರ್ಯಕ್ರಮಗಳಿಗಾಗಿ ದೆಹಲಿಗೆ ಭೇಟಿ ನೀಡುತ್ತಾರೆ. ಅದರಲ್ಲಿ ವಿಶೇಷ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿ, "ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮಾತುಗಳೇ ಅಂತಿಮ. ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ. ಶಿವಕುಮಾರ್ ಅವರು ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದಾಗಿ ಮತ್ತು ಅದನ್ನು ಪಾಲಿಸುವುದಾಗಿಯೂ ಹೇಳಿದ್ದಾರೆ. ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಪಕ್ಷಕ್ಕೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಏನು ಆಗಬೇಕೋ ಅದು ಸೂಕ್ತ ಸಮಯದಲ್ಲಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.
In the midst of ongoing speculation about a possible leadership change in Karnataka, Minister Satish Jarkiholi made a sudden trip to New Delhi, creating a fresh wave of political curiosity. Sources say he is expected to stay in Delhi for three days and meet AICC President Mallikarjun Kharge to hold key discussions.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm