ಬ್ರೇಕಿಂಗ್ ನ್ಯೂಸ್
04-11-25 04:38 pm Bangalore Correspondent ಕರ್ನಾಟಕ
ಬೆಂಗಳೂರು, ನ.4 : ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (79) ನಿಧನ ಹೊಂದಿದ್ದಾರೆ.
ಹೆಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಮೇಟಿ 2018ರ ಚುನಾವಣೆಯಲ್ಲಿ ಸೋತಿದ್ದರು. 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಈ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಬುಧವಾರ(ನಾಳೆ) ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
Senior Congress leader and former Karnataka minister H.Y. Meti (79) passed away at a private hospital in Jayanagar, Bengaluru, following a prolonged illness.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm