ಡಿ. 31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ; ಸಂಭ್ರಮಕ್ಕೆ ಮೂಗುದಾರ ಹಾಕಿದ ಪೊಲೀಸ್ ಇಲಾಖೆ !

29-12-20 12:36 am       Bangalore Correspondent   ಕರ್ನಾಟಕ

ರೂಪಾಂತರಗೊಂಡ ಕೊರೋನಾ ವೈರಸ್​ ಹಿನ್ನಲೆ ಈ ಬಾರಿ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು (ಡಿ. 29): ರೋನಾ ವರ್ಷಕ್ಕೆ ಗುಡ್ ಬೈ ಹೇಳಿ 2021 ಹೊಸ ವರ್ಷವನ್ನು ಸ್ವೀಕರಿಸುವ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕರೋನಾ ರೂಪಾಂತರ ಅಲೆ ಇರುವ ಹಿನ್ನೆಲೆಯಲ್ಲಿ ಸುರಕ್ಷತಾ ಭಾಗವಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಾತ್ರಿ 8 ರಿಂದ ಮರು ದಿನ ಬೆಳಗ್ಗೆ 6 ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಅನ್ವಯ ವಾಗುವಂತೆ ಆದೇಶ ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶ ಮಾಡಿದ್ದಾರೆ.

ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್​ ಆಯುಕ್ತ ಕಮಲ್​ಪಂತ್​ ತಿಳಿಸಿದರು.

ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್​ಗಳಲ್ಲಿ ಈವೆಂಟ್​, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್​ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.

ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್​ ಸ್ಟ್ರೀಟ್​, ಚರ್ಚ್​ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್​ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್​ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

There will be no public New Year celebrations in Bengaluru involving large groups as the city police have announced curfew on New Year’s Eve. The move was announced by Bengaluru Police Commissioner Kamal Pant who said that Section 144 of CRPC would be imposed across the city in the light of the Covid-19 pandemic.