ಬ್ರೇಕಿಂಗ್ ನ್ಯೂಸ್
29-12-20 09:27 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಡಿ.29: ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಎಂಬಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದಕ್ಕೂ ಮುನ್ನ ಕಾರು ಚಾಲಕ ಮತ್ತು ತಮ್ಮ ಆಪ್ತ ಕಾರ್ಯದರ್ಶಿಯನ್ನು ನೀವು ಹೋಗಿ ಎಂದು ಕಳುಹಿಸಿ ಕೊಟ್ಟಿದ್ದ ಧರ್ಮೇಗೌಡ, ಕಡೂರಿನ ಆಪ್ತರೊಬ್ಬರಿಗೆ ಫೋನ್ ಮಾಡಿ, ಕಡೂರಿನಿಂದ ರೈಲು ಎಷ್ಟು ಹೊತ್ತಿಗೆ ಬರುತ್ತೆ ಎಂದು ಕೇಳಿದ್ದಾರೆ. ಆಬಳಿಕ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ರಾತ್ರಿ 10.30 ಆದರೂ, ಮನೆಗೆ ಬಾರದಿರುವುದನ್ನು ಗಮನಿಸಿ ಮನೆಯವರು ಹುಡುಕಾಟ ನಡೆಸಿದಾಗ ಬೆಳಗ್ಗಿನ ಹೊತ್ತಿಗೆ ರೈಲು ಹಳಿಯಲ್ಲಿ ಛಿದ್ರವಾಗಿದ್ದ ಧರ್ಮೇಗೌಡರ ಮೃತದೇಹ ಪತ್ತೆಯಾಗಿದೆ.
ಜೆಡಿಎಸ್ ನಿಂದ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಧರ್ಮೇಗೌಡರು ಹಿರಿಯ ಸದಸ್ಯರಾಗಿದ್ದು 2018ರಲ್ಲಿ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಪರಿಷತ್ತಿನಲ್ಲಿ ಗಲಾಟೆಯಾಗಿದ್ದು ಮತ್ತು ಉಪ ಸಭಾಪತಿಯನ್ನು ಸದಸ್ಯರು ಸೇರಿ ಎಳೆದಾಡಿದ್ದು ಭಾರೀ ಆಘಾತ, ಅವಮಾನಕ್ಕೀಡಾಗಿದ್ದರು. ಆನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧರ್ಮೇಗೌಡ ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನೋದು ತಿಳಿದುಬಂದಿಲ್ಲ.
ಈ ನಡುವೆ, ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗುತ್ತಿದ್ದು ಪೊಲೀಸರು ಅದನ್ನು ಓದಿ ಹೇಳಿದ್ದಾರೆ. ವಿಧಾನ ಪರಿಷತ್ತಿನ ಗಲಾಟೆಯಿಂದ ಮನ ನೊಂದಿದ್ದೇನೆ. ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಘಟನೆ ಬಗ್ಗೆ ತನಿಖೆಯಾಗಬೇಕು ಎಂದು ಬರೆದಿದ್ದಾರೆ.
ಉಪ ಸಭಾಪತಿ ಆಗಿದ್ದವರು ಆತ್ಮಹತ್ಯೆಗೆ ಶರಣಾಗಿದ್ದು ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದು ಅತ್ಯಂತ ಘೋರವಾದ ಘಟನೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಕಣ್ಣೀರು ಹಾಕಿದ್ದಾರೆ. ತನ್ನ ಮನಸ್ಸಿನ ನೋವನ್ನು ಯಾರಲ್ಲೂ ಹೇಳಿಕೊಂಡಿರಲಿಲ್ಲ. ಹೀಗೆ ಮಾಡುತ್ತಾರೆಂದು ಅನಿಸಿರಲಿಲ್ಲ ಎಂದಿದ್ದಾರೆ.
In a shocking development, Karnataka Legislative Council deputy chairman SL Dharme Gowda (64), allegedly committed suicide.The JD(S) legislator was found dead on a Railway track at 2 am on Tuesday December 29, near Chikkamagaluru.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm