ಬ್ರೇಕಿಂಗ್ ನ್ಯೂಸ್
10-11-25 12:22 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು ಈ ಬಗ್ಗೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ವಿಮಾನ ನಿಲ್ದಾಣದಂತಹ ಹೆಚ್ಚು ಭದ್ರತೆಯಿರುವ ಜಾಗದಲ್ಲಿ ನಮಾಜ್ ಮಾಡುವುದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ.
ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಜಾಲತಾಣದಲ್ಲಿ ವಿಡಿಯೋ ಸಹಿತ ಪ್ರಶ್ನೆ ಮಾಡಿದ್ದು ಇದಕ್ಕೆ ಅನುಮತಿ ಕೊಟ್ಟವರು ಯಾರು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸ್ಪಷ್ಟನೆ ಕೋರಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯ್ ಪ್ರಸಾದ್, ಈ ವ್ಯಕ್ತಿಗಳು ವಿಮಾನ ನಿಲ್ದಾಣ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಹಾಗಾದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್‌ಎಸ್‌ಎಸ್ ಪಥ ಸಂಚಲನ ನಡೆಸುವುದಕ್ಕೆ ಸರ್ಕಾರ ಏಕೆ ಆಕ್ಷೇಪಿಸುತ್ತದೆ? ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ನಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚಿ ಕುಳಿತಿರುವುದೇಕೆ? ಇದು ಗಂಭೀರ ಭದ್ರತಾ ಲೋಪ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ಸೂಕ್ಷ್ಮ ವಲಯದಲ್ಲಿ ಇದು ಗಂಭೀರ ಭದ್ರತಾ ಕಾಳಜಿಯನ್ನು ಉಂಟು ಮಾಡುವುದಿಲ್ಲವೇ? ಎಂದು ಅವರು ದಿನಾಂಕವಿಲ್ಲದ ಘಟನೆಯ ಫೋಟೋ ಮತ್ತು ವೀಡಿಯೊವನ್ನು ಹಂಚಿಕೊಂಡು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
Video showing namaz inside Bengaluru airport triggers BJP-Congress war of words, BJP says How was Namaz allowed inside Bengaluru Airport’s T2 terminal?
— Pinky Rajpurohit 🇮🇳 (@Madrassan_Pinky) November 10, 2025
BJP: Why object to RSS events with due permission, but ignore this?
Isn’t this a serious security concern?#bengaluru #namaz… pic.twitter.com/4WMtINE0MY
A video showing a group of people offering Namaz inside the premises of Kempegowda International Airport (Terminal 2) has gone viral, sparking controversy. The BJP has raised objections, questioning how such an activity was allowed in a high-security zone.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm