ಬ್ರೇಕಿಂಗ್ ನ್ಯೂಸ್
29-12-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.29: ಮಕರ ಸಂಕ್ರಮಣದ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ನೀಡಿದ್ದ ಹೇಳಿಕೆಗೆ ಪೂರಕವಾಗಿ ಮತ್ತಿಬ್ಬರು ನಾಯಕರು ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ನೀಡಿದ ಹೇಳಿಕೆ ಈಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ತಟ್ಟಿದೆ. ಹಾಗೆಯೇ ಬಿಜೆಪಿಯ ಕೆಲ ಶಾಸಕರ ಶಾಪವೂ ಇದೆ. ಈ ಕಾರಣಕ್ಕೆ ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಿಕಾರದಲ್ಲಿ ಇರುವುದಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತೋ ಇಲ್ಲವೋ.. ಎಂದು ಹೇಳುತ್ತಿಲ್ಲ. ಆದರೆ, ತನಗೆ ಬಂದ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನ ಕೆಳಗಿಳಿಸಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ. ಜನವರಿ 16ರ ನಂತರ ಅವರು ಅಧಿಕಾರದಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂದಿದ್ದಾರೆ.
ಸಿಗಂದೂರು ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಯಡಿಯೂರಪ್ಪ ಅವರು ದೇವಿಯ ಶಾಪಕ್ಕೆ ತುತ್ತಾಗಿದ್ಧಾರೆ. ಹೀಗಾಗಿಯೇ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಶನ್ ಪ್ರಕರಣ ಬಂದಿದೆ. ಇದು ದೇವಿಯ ಶಾಪ ತಟ್ಟಿರುವುದಕ್ಕೆ ಸಾಕ್ಷಿ. ನಾನು ಯಡಿಯೂರಪ್ಪ ಅವರ ರಾಜೀನಾಮೆ ಕೇಳುವುದಿಲ್ಲ. ಯಡಿಯೂರಪ್ಪ ಬಗ್ಗೆ ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕರೂ ಆಗಿರುವ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಹೇಳಿಕೆ ನೀಡಿದ್ದು ನಾಯಕತ್ವ ಬದಲಾವಣೆಯ ಸುಳಿವನ್ನು ನೀಡಿದ್ದಾರೆ. ದತ್ತಮಾಲ ಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿಯಾಗಿ ಭಿಕ್ಷಾಟನೆ ಹೊರಡುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ರಾಜಕಾರಣದಲ್ಲಿ ಎಲ್ಲವೂ ಇರುತ್ತೆ. ಸದ್ದುಗದ್ದಲ ಇಲ್ಲದಿದ್ದರೆ ಜಾತ್ರೆ ಆಗಲ್ಲ ಎಂದು ಸಿ.ಟಿ. ರವಿ ಹೇಳಿದ್ಧಾರೆ. ಯತ್ನಾಳ್ ಹೇಳಿಕೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿ.ಟಿ. ರವಿ ಈ ರೀತಿ ಪ್ರತಿಕ್ರಿಯೆ ನೀಡಿದ್ದು ಕುತೂಹಲ ಮೂಡಿಸಿದೆ.
ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಬಿಜೆಪಿ ನಾಯಕರು ಎಷ್ಟೇ ಹೇಳಿಕೊಂಡರೂ, ಒಳಗಿಂದೊಳಗೆ ಸಿಎಂ ಪದಚ್ಯುತಿಗೆ ಪ್ರಯತ್ನಗಳು ನಡೆಯುತ್ತಲೇ ಇದೆ. ಸಂಕ್ರಾಂತಿ ವೇಳೆಗೆ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು ಎಂಬ ಲೆಕ್ಕಾಚಾರವನ್ನು ಯಡಿಯೂರಪ್ಪ ವಿರೋಧಿಗಳು ಮಾಡುತ್ತಿದ್ದಾರೆ.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm