ಬ್ರೇಕಿಂಗ್ ನ್ಯೂಸ್
29-12-20 12:40 pm Special Political Correspondent ಕರ್ನಾಟಕ
ಚಿಕ್ಕಮಗಳೂರು, ಡಿ.29: ಬೀರೂರು ಕ್ಷೇತ್ರದ ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ ಅವರ ಪುತ್ರ ಎಸ್.ಎಲ್.ಧರ್ಮೇಗೌಡ ರಾಜಕೀಯದಲ್ಲಿ ದಿಢೀರ್ ಏಳಿಗೆ ಕಂಡವರಲ್ಲ. ತಂದೆ ಶಾಸಕರಾಗಿದ್ದರೂ ಗ್ರಾಮ ಪಂಚಾಯಿತಿ ಮಟ್ಟದಿಂದ ರಾಜಕೀಯ ಶುರು ಮಾಡಿ ವಿಧಾನ ಪರಿಷತ್ತಿನ ಉಪ ಸಭಾಪತಿ ಹುದ್ದೆಗೇರಿದವರು.
ಮೂರು ದಶಕಗಳ ರಾಜಕೀಯ ಇತಿಹಾಸದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ವಿವಿಧ ಹಂತದಲ್ಲಿ ಅಧಿಕಾರ ಹಿಡಿದು ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಗಳಿಸಿದ್ದವರು ಧರ್ಮೇಗೌಡರು. ಯಾವತ್ತೂ ಹಿಡಿದ ಕೆಲಸವನ್ನು ಸಾಧಿಸದೆ ಹೆಜ್ಜೆ ಹಿಂದಿಟ್ಟವರಲ್ಲ. ಹಠ ಸಾಧಿಸಿ ಕೆಲಸ ಮಾಡಿಸುವ ಜಾಯಮಾನ ಎಸ್.ಎಲ್.ಧರ್ಮೇಗೌಡ ಅವರದ್ದಾಗಿತ್ತು.
ಕಡೂರು ತಾಲೂಕು ಸಖರಾಯಪಟ್ಟಣ ಸಮೀಪದ ಸರಪನಹಳ್ಳಿಯವರಾದ ಎಸ್.ಎಲ್.ಧರ್ಮೇಗೌಡ, ಚಿಕ್ಕಮಗಳೂರು ತಾಲೂಕು ಬಿಳೇಕಲ್ಲಹಳ್ಳಿ ಮಂಡಲ ಪಂಚಾಯಿತಿ ಸದಸ್ಯರಾಗಿ, ಮಂಡಲ ಪಂಚಾಯಿತಿ ಪ್ರಧಾನರಾಗುವ ಮೂಲಕ ರಾಜಕೀಯ ರಂಗ ಪ್ರವೇಶ ಮಾಡಿದ್ದರು. ನಂತರ ಸಹಕಾರ ಕ್ಷೇತ್ರದತ್ತ ಹೊರಳಿದ ಅವರು, ಚಿಕ್ಕಮಗಳೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿ, ಹಾಸನ ಹಾಲು ಒಕ್ಕೂಟದ ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ಅಧ್ಯಕ್ಷರಾಗಿ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ, ಚಿಕ್ಕಮಗಳೂರು ಜನತಾ ಬಜಾರ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳದ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ, ವಿಮಾ ಸಹಕಾರ ಸಂಘದ ನಿರ್ದೇಶಕ, ರಾಜ್ಯ ಕೈಗಾರಿಕಾ ಬ್ಯಾಂಕ್ ನಿರ್ದೇಶಕ, ಹೊಸದಿಲ್ಲಿಯ ಕ್ರಿಬ್ಕೊ ಸಂಸ್ಥೆ ನಿರ್ದೇಶಕ, ನ್ಯಾಫೆಡ್ ಸಂಸ್ಥೆ ನಿರ್ದೇಶಕ, ಇಂಡಿಯನ್ ಪೊಟಾಷ್ ಲಿಮಿಟೆಡ್ ನಿರ್ದೇಶಕ, ಎನ್‍ಸಿಡಿಸಿ ನಿರ್ದೇಶಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ರೈತರಿಗೆ ಅನುಕೂಲವಾಗುವಂತಹ ಕೆಲಸಗಳನ್ನು ಮಾಡಿದ್ದರು.
ಒಮ್ಮೆ ತಾಲೂಕು ಪಂಚಾಯಿತಿ ಸದಸ್ಯ, ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಏಕಕಾಲಕ್ಕೆ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಆಯ್ಕೆಯಾಗಿ ಜನಸೇವೆ ಮಾಡಿದ ಹೆಗ್ಗಳಿಕೆ ಇವರದ್ದು. ಬೀರೂರು ವಿಧಾನಸಭಾ ಕ್ಷೇತ್ರದಿಂದ ಜನತಾ ದಳದಿಂದ ಒಂದು ಬಾರಿ ಶಾಸಕರಾಗಿದ್ದರು. ನಂತರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿ.ಟಿ.ರವಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಬೀರೂರು ಕ್ಷೇತ್ರ ಮಾಯವಾದ ಮೇಲೆ ರಾಜಕೀಯ ಅಸ್ತಿತ್ವ ಕಂಡುಕೊಳ್ಳಲು ಸಾಕಷ್ಟು ಪರದಾಡಿದ್ದರು. ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರಕಾರ ರಚನೆಯಾದ ನಂತರ ಎಸ್.ಎಲ್.ಧರ್ಮೇಗೌಡ ಅವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡಲಾಗಿತ್ತು. ನಂತರ ಉಪ ಸಭಾಪತಿ ಸ್ಥಾನವೂ ದಕ್ಕಿತ್ತು.
ಮೊನ್ನೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ಪ್ರಕರಣದಲ್ಲಿ ಸಭಾಪತಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರನ್ನು ಸದಸ್ಯರು ಎಳೆದಾಡಿ ರಂಪ ಮಾಡಿದ್ದು ಭಾರೀ ನೋವಿಗೆ ಕಾರಣವಾಗಿತ್ತು. ಅತ್ಯಂತ ಸಾಧು ಸ್ವಭಾವದ ಗೌಡರಿಗೆ ಈ ಪ್ರಕರಣ ಮಾನಸಿಕವಾಗಿ ಕುಗ್ಗುವಂತೆ ಮಾಡಿತ್ತು. ಈ ಬಗ್ಗೆ ಯಾರಲ್ಲೂ ಹೆಚ್ಚು ಮಾತನಾಡುತ್ತಿರಲಿಲ್ಲ. ದೇವೇಗೌಡರ ಕುಟುಂಬದ ಅತ್ಯಾಪ್ತರಲ್ಲಿ ಒಬ್ಬರಾಗಿದ್ದರೂ, ಈ ಪ್ರಕರಣದ ಬಳಿಕ ದೂರ ಉಳಿದಿದ್ದರು.
ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗುವಷ್ಟು ದುರ್ಬಲ ಮನಸ್ಸಿನವರಲ್ಲ ಎಂಬುದು ಅವರ ಆಪ್ತರ ಅಭಿಪ್ರಾಯ. ಕೆಲ ವರ್ಷಗಳಿಂದ ಅನಾರೋಗ್ಯ ಕಾಣಿಸಿಕೊಂಡ ಕಾರಣ ಆರೋಗ್ಯದ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿದೆ.
A detailed report of S L Dharmegowda from Gram Panchayat Member to Karnataka Deputy Chairman Council by Headline Karnataka.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm