ಬ್ರೇಕಿಂಗ್ ನ್ಯೂಸ್
19-11-25 12:20 pm HK News Desk ಕರ್ನಾಟಕ
ಮೈಸೂರು, ನ.19 : ಹಿಂದಿನ ಕಾಲಘಟ್ಟದಲ್ಲಿ ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದರು ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಕ್ಕೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಹಿಂದಿನ ಕಾಲದಲ್ಲಿ ಅಂತಹ ಅನಿವಾರ್ಯತೆ ಇದ್ದಿತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿದ್ದವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ನಂತರದ ಭಾಷಣದಲ್ಲಿ ಪುರುಷೋತ್ತಮ ಬಿಳಿಮಲೆಯವರು ನೀಡಿದ ಈ ಹೇಳಿಕೆ ಬಾರೀ ವಿವಾದ ಹುಟ್ಟಿಸಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು.
ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದುದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದರು. ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು.
ಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಬಾರದು. ಅವರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದಿದ್ದಾರೆ.
Kannada Development Authority Chairman Prof. Purushothama Bilimale has stirred a major controversy after stating that many Yaksagana artists in earlier decades were forced into same-sex exploitation. Speaking at a book-release event in Mysuru, Bilimale claimed that several male artists in female roles faced pressure from senior performers and troupe leaders, and refusing advances allegedly led to being denied roles or removed from troupes.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm