ಬ್ರೇಕಿಂಗ್ ನ್ಯೂಸ್
21-11-25 10:19 am Bangalore Correspondent ಕರ್ನಾಟಕ
ಬೆಂಗಳೂರು, ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
50 ಪರ್ಸೆಂಟ್ ದಂಡ ವಿನಾಯಿತಿ
ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಕಟ್ಟಲು ಸುಲಭವಾಗುವಂತೆ ರಾಜ್ಯ ಸರ್ಕಾರ ಬಿಗ್ ಆಫರ್ ನೀಡಿದೆ. ಈ ಹಿಂದೆ ಕೂಡ 50 ಪರ್ಸೆಂಟ್ ದಂಡ ವಿನಾಯಿತಿಗೆ ಭರ್ಜರಿ ರಿಯಾಯಿತಿ ಸಿಕ್ಕಿತ್ತು. ಇದೀಗ ಮತ್ತೆ ವಾಹನ ಸವಾರರಿಗೆ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಆಫರ್ ನೀಡಿದ್ದು, ಸರ್ಕಾರದ ಆದೇಶದಂತೆ (ನವೆಂಬರ್ 21) ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಹಲವು ತಿಂಗಳಿಂದ ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಇದೀಗ ಆಫರ್ ಬಳಸಿ ದಂಡ ಪಾವತಿಸಬಹುದಾಗಿದೆ. ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ ಸೈಟ್ ಗಳಲ್ಲಿ ದಂಡದ ವಿವರ ಪಡೆದು ಅಲ್ಲೇ ಹಣ ಪಾವತಿಸಬಹುದು. ರಿಯಾತಿ ಬಳಸಿಕೊಳ್ಳಲು ಸರ್ಕಾರ ಸೂಚಿಸಿದೆ. ಕಳೆದ ಬಾರಿ ಕೂಡ ಆಫರ್ ನೀಡಲಾಗಿದ್ದು, ಭರ್ಜರಿ ದಂಡದ ಕಲೆಕ್ಷನ್ ಆಗಿತ್ತು.
The Karnataka Congress government has once again brought good news for vehicle owners by reintroducing the 50% traffic fine rebate scheme. The state government has issued a new order announcing the revival of the earlier rebate offer.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm