ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ ಕೇಳುತ್ತೀರಿ.. ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ; ರಾಜಕೀಯ ಬೆಳವಣಿಗೆ ಮಧ್ಯೆ ಮತ್ತೆ ಸಿದ್ದರಾಮಯ್ಯ ಗುಡುಗು 

21-11-25 05:25 pm       HK News Desk   ಕರ್ನಾಟಕ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಆದರೆ ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.‌

ಮೈಸೂರು, ನ.21 : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ನಾವೆಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಆದರೆ ಹೈಕಮಾಂಡ್ ಎಂದೂ ನಾಯಕತ್ವ ಬದಲಾವಣೆ ಬಗ್ಗೆ ಹೇಳಿದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.‌

ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಮತ್ತು ಮುಂದಿನ ಎರಡು ಬಜೆಟನ್ನೂ ನಾನೇ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ದೆಹಲಿಗೆ ತೆರಳಿರುವ ಶಾಸಕರ ಟೀಮಿಗೂ ಸಂದೇಶ ರವಾನಿಸಿದ್ದಾರೆ. 

ಸಿಎಂ ಆಗಿ ನಾನೇ ಐದು ವರ್ಷ ಕಾಲ ಮುಂದುವರಿಯುತ್ತೇನೆ. ಇನ್ನು ಎರಡು ಬಜೆಟ್ ನಾನೇ ಮಂಡಿಸುತ್ತೇನೆ. ಆದರೆ ಹೈಕಮಾಂಡ್ ಏನು ಹೇಳಿದರೂ ಕೇಳಬೇಕಾಗುತ್ತದೆ, ಡಿಕೆ ಶಿವಕುಮಾರ್ ಅವರೂ ಕೇಳಬೇಕು. ಹೈಕಮಾಂಡ್ ಮಾತಿಗೆ ನಾವು ಬದ್ಧ. ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಹೇಳಿಲ್ಲ ಎಂದ ಮೇಲೆ ನೀವು ಯಾಕೆ ಪದೇ ಪದೇ ಕೇಳಬೇಕು ಎಂದು ತಿವಿದಿದ್ದಾರೆ.

ಇದೇ ವೇಳೆ ಡಿಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರು "ಸಿದ್ದರಾಮಯ್ಯ ಎಂದಿಗೂ ಮಾತು ತಪ್ಪಲ್ಲ" ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಹೌದು, ನಾನು ಮಾತಿಗೆ ತಪ್ಪಲ್ಲ. ರಾಜ್ಯದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ. ನಾನೇ ಸಿಎಂ ಆಗಿಯೂ ಮುಂದುವರಿಯುತ್ತೇನೆ ಎಂದರು. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು. ಶಾಸಕರು ಹೇಳಿಕೆ ಕೊಡುತ್ತಿರುವುದರಿಂದ ಗೊಂದಲಕ್ಕೆ ಕಾರಣವಾಗುತ್ತಿದೆ ಎಂಬ ಪ್ರಶ್ನೆಗೆ, ಅದಕ್ಕೆ ಹೈಕಮಾಂಡ್ ಸೂಚನೆ ನೀಡಲಿದೆ. ಹೈಕಮಾಂಡ್ ಸೂಚನೆಯನ್ನು ನಾನು ಆದಿಯಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.

Amid intense political activity and speculation over a possible change in leadership in Karnataka, Chief Minister Siddaramaiah on Friday made a strong and surprising statement. Addressing questions on leadership change and cabinet expansion, he clarified that such decisions ultimately lie with the party’s high command, and leaders abide by their directions.