ಬ್ರೇಕಿಂಗ್ ನ್ಯೂಸ್
22-11-25 08:03 pm HK News Desk ಕರ್ನಾಟಕ
ಹುಬ್ಬಳ್ಳಿ, ನ.22: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ಕಾಂಗ್ರೆಸ್ ಶಾಸಕರ 'ಕುದುರೆ ವ್ಯಾಪಾರ'ಕ್ಕೆ ಕಾರಣವಾಗಿದೆ. ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ಕೆ.ಸಿ. ವೀರೇಂದ್ರ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಕೇಳಿಕೊಳ್ಳುವಷ್ಟರ ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, "ಕಾಂಗ್ರೆಸ್‌ನಲ್ಲಿ ಒಳ ಜಗಳ ಜೋರಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲು ಬಯಸುವುದಿಲ್ಲ. ಆದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದನ್ನು ಶಿವಕುಮಾರ್ ಇಷ್ಟಪಡುವುದಿಲ್ಲ ಎಂದರು. ಇಂತಹ ಪರಿಸ್ಥಿತಿಯಿಂದಾಗಿ, ಎರಡೂ ಬಣಗಳು ಈಗ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿವೆ. ಶಾಸಕರ ಬೆಂಬಲ ಪಡೆಯಲು ಮತ್ತು ಅವರಿಗೆ ಹಣ ಪಾವತಿಸಲು ಶಿವಕುಮಾರ್ ಜೈಲಿಗೆ ಹೋಗಿರುವುದನ್ನು ನೀವು ನೋಡಿರಬಹುದು ಎಂದು ವಾಗ್ದಾಳಿ ನಡೆಸಿದರು.
ಶಾಸಕರ "ಕುದುರೆ ವ್ಯಾಪಾರ" ನಡೆಯುತ್ತಿರುವ ಹಂತಕ್ಕೆ ಕಾಂಗ್ರೆಸ್ ಪರಿಸ್ಥಿತಿ ತಲುಪಿದೆ. ಅಧಿಕಾರಕ್ಕಾಗಿ ಇವರು ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಂತಹ ನಗರದಲ್ಲಿ ಹಾಡಹಗಲೇ ದರೋಡೆಗಳು ನಡೆಯುತ್ತಿವೆ. ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ಐದು ವರ್ಷ ಆಡಳಿತ ಮಾಡಲು ಜನ ಬಹುಮತ ನೀಡಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ಸಿಗರ ಜೊತೆಗೆ ಸರ್ಕಾರ ರಚಿಸುವ ಇಂಗಿತ ನಮ್ಮ ಪಕ್ಷಕ್ಕೆ ಇಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಪರಿಸ್ಥಿತಿ ಭಿನ್ನವಾಗಿದೆ. ಹೀಗಾಗಿ ಕಾಂಗ್ರೆಸ್ ನಿಂದ ಹೊರ ಬರುವವರ ಜೊತೆ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬುದು ದೂರದ ಮಾತು ಎಂದು ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Union Minister Pralhad Joshi has alleged that the ongoing power struggle within the Karnataka Congress has led to intense “horse-trading” among MLAs. Speaking in Hubballi, he said that Deputy Chief Minister D.K. Shivakumar visiting imprisoned Congress MLAs Vinay Kulkarni and K.C. Virendra in Bengaluru Central Jail to seek their support is disgraceful and highlights the deep internal conflict in the party.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm