ಬ್ರೇಕಿಂಗ್ ನ್ಯೂಸ್
24-11-25 09:55 pm Bangalore Correspondent ಕರ್ನಾಟಕ
ಬೆಂಗಳೂರು, ನ.24 : ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು. ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷವನ್ನು ತಲುಪಿದ ನಂತರ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ವದಂತಿ ನಡುವೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ನಾನೇ ಇರಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾವು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ ಎಂದು ಗರಂ ಆದರು. ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು.
ಎರಡೂವರೆ ವರ್ಷಗಳಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದಷ್ಟೇ ಹೇಳಿದರು.
Chief Minister Siddaramaiah said on Monday that any decision regarding a change in leadership will be made by the Congress High Command. He added, “Whatever decision the High Command takes, both I and D.K. Shivakumar must accept it. If the High Command decides that I should continue in the post, I will continue.”
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm