ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡಿಕೊಂಡು ಬನ್ನಿ ಎಂದ ಹೈಕಮಾಂಡ್, ದಿಢೀರ್ ಡಿಕೆಶಿಗೆ ಮಾತುಕತೆಗೆ ಕರೆದ ಸಿದ್ದರಾಮಯ್ಯ! 

28-11-25 10:37 pm       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಪಟ್ಟದ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಡಿಕೆ ಶಿವಕುಮಾರ್ ಅವರನ್ನು ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸಕ್ಕೆ ಮಾತುಕತೆಗೆ ಕರೆದಿದ್ದಾರೆ.

ಬೆಂಗಳೂರು, ನ.28 : ಮುಖ್ಯಮಂತ್ರಿ ಪಟ್ಟದ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಡಿಕೆ ಶಿವಕುಮಾರ್ ಅವರನ್ನು ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸಕ್ಕೆ ಮಾತುಕತೆಗೆ ಕರೆದಿದ್ದಾರೆ.

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ಶನಿವಾರ ಬೆಳಗ್ಗೆ 9.30ಕ್ಕೆ ಕಾವೇರಿ ನಿವಾಸಕ್ಕೆ ಬನ್ನಿ ಎಂದು ಹೇಳಿದ್ದಾರೆ. ಸಿಎಂ ಆಹ್ವಾನ ಒಪ್ಪಿರುವ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಲಿದ್ದು ಉಭಯ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. 

ಶನಿವಾರ ಸಂಜೆಯೇ ದೆಹಲಿಗೆ ತೆರಳಲು ಡಿಕೆಶಿ ತಯಾರಾಗಿದ್ದರು. ಇದಕ್ಕಾಗಿ ವಿಮಾನದ ಟಿಕೆಟ್ ಕೂಡ ಬುಕ್ ಮಾಡಿದ್ದರು.‌ ಆದರೆ ದೆಹಲಿ ನಾಯಕರು ನೋ ಎಂದಿದ್ದು ನೀವೇ ಒಂದು ನಿರ್ಧಾರಕ್ಕೆ ಬನ್ನಿ ಎಂದು ಇಬ್ಬರು ನಾಯಕರಿಗೂ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಡಿಕೆಶಿ ಅವರನ್ನು ಮಾತುಕತೆಗೆ ಕರೆದಿದ್ದಾರೆ ಎನ್ನಲಾಗುತ್ತಿದೆ.‌

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನವರು ನನಗೆ ಮತ್ತು ಡಿಕೆ ಶಿವಕುಮಾರ್ ಗೆ ಕರೆ ಮಾಡಿದ್ದರು. ಇಬ್ಬರು ಕುಳಿತು ಮಾತಾಡಿ ಎಂದಿದ್ದಾರೆ. ಹೈಕಮಾಂಡ್ ಏನು ಹೇಳುತ್ತೆ ಅದನ್ನು ಕೇಳುತ್ತೇನೆ. ಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಆದರೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

ಶುಕ್ರವಾರ ಸಂಜೆ 7:45ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲು ಫ್ಲೈಟ್ ಬುಕ್ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ಮುಂದೂಡಿದ್ದಾರೆ. ಇದೇ ವೇಳೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಶನಿವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು ಆನಂತರವೇ ದೆಹಲಿ ವಿಮಾನ ಹತ್ತಲಿದ್ದಾರೆ.

The tussle for the Chief Minister’s position in Karnataka has reached its decisive stage. CM Siddaramaiah has personally called Deputy CM DK Shivakumar for a crucial meeting at his residence on Saturday morning at 9:30 AM, following instructions from the Congress high command.