ಬ್ರೇಕಿಂಗ್ ನ್ಯೂಸ್
29-11-25 02:26 pm HK News Desk ಕರ್ನಾಟಕ
ರಾಯಚೂರು, ನ.29 : ಕೋಲಾರದಿಂದ ರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು , ಕೋಲಾರ ಜಿಲ್ಲೆ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ.
ರಾಷ್ಟ್ರೀಯ ಹೆದ್ದಾರಿ 167 ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೊರಟಿದ್ದ ಕಾರಿಗೆ ಆದೋನಿ ಕಡೆಗೆ ಹೊರಟಿದ್ದ ಆಂಧ್ರದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 76 ವರ್ಷದ ವೆಂಕಟೇಶಪ್ಪ, 34 ವರ್ಷದ ಸತೀಶ್ ಕುಮಾರ್, ಆತನ ಪತ್ನಿ 26 ವರ್ಷದ ಮೀನಾಕ್ಷಿ, ಇಬ್ಬರು ಮಕ್ಕಳಾರ 6 ವರ್ಷದ ಬಣಿತ್ ಗೌಡ, 4 ವರ್ಷದ ರಿತ್ವಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಗಂಗಮ್ಮ ಹಾಗೂ ಚಾಲಕ ನವೀನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಇಂದು ಮುಂಜಾನೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ರು, ಸ್ವಿಫ್ಟ್ ಡಿಜೈರ್ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಫಾರ್ಚೂನರ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಸಿಲುಕಿಕೊಂಡ ಮೃತ ದೇಹಗಳನ್ನ ಪೊಲೀಸರು ಹೊರತೆಗೆದಿದ್ದಾರೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 164 ರಲ್ಲಿ ಭೀಕರ ಅಪಘಾತ ನಡೆದಿದೆ. ಎಮ್ಮಿಗನೂರು -ಆದೋನಿ ಮಧ್ಯದಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಎಮ್ಮಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ರಾತ್ರಿ 9 ಗಂಟೆಗೆ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು ಎಂದು ಗಾಯಾಳು ಗಂಗಮ್ಮ ತಂಗಿ ಲಕ್ಷ್ಮಮ್ಮ ತಿಳಿಸಿದ್ದಾರೆ.
A family from Kolar traveling to Mantralayam for Sri Raghavendra Swamy darshan met with a tragic accident, resulting in the death of five family members on the spot. The horrific incident occurred near Kotekal in Emmiganur village of Andhra Pradesh’s Kurnool district.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am