ಬ್ರೇಕಿಂಗ್ ನ್ಯೂಸ್
02-12-25 10:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2 : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಇಮೇಲ್ ವಿಳಾಸಕ್ಕೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಶಾಪಿಂಗ್ ಮಾಲ್ ಮತ್ತು ಏರ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಶಾಪಿಂಗ್ ಮಾಲ್‌ಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶ ರವಾನೆಯಾಗಿದೆ. ನವೆಂಬರ್ 30, 2025 ರಂದು ಬೆಳಗ್ಗೆ 11.53ಕ್ಕೆ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಅನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್‌ಗೆ ಕಳುಹಿಸಲಾಗಿದೆ.
ಬೆದರಿಕೆ ಹಾಕಿದ ವ್ಯಕ್ತಿ ತನ್ನನ್ನು 'ಜೈಷ್-ಇ ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್' ಎಂದು ಪರಿಚಯಿಸಿ ಇಂಗ್ಲಿಷ್‌ನಲ್ಲಿ ಸಂದೇಶ ಬರೆದಿದ್ದಾನೆ. ಜೈಷ್-ಇ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್‌ನಿಂದ ಇದೊಂದು ಎಚ್ಚರಿಕೆ. ನಾವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಒರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಂತ್ರಿ ಸ್ಕ್ವೇರ್ ಮಾಲ್ ಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಸಂಜೆ 7 ಗಂಟೆಯ ನಂತರ ಬಾಂಬ್ ಸ್ಫೋಟಗೊಳ್ಳಲಿದೆ. ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು. ಅಲ್ಲದೆ, 'ಇದು ಸಂಭವಿಸದಿರಲು ಬಯಸಿದರೆ ನೀವು +91 936***8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಹಣಕ್ಕೆ ಬೇಡಿಕೆ ಇಡುವ ಪ್ರಯತ್ನವನ್ನೂ ಮಾಡಲಾಗಿದೆ.
ಬೆದರಿಕೆ ಇ-ಮೇಲ್ ಅನ್ನು ಮೋಹಿತ್ ಕುಮಾರ್ ಹೆಸರಿನ ಇಮೇಲ್ ಐಡಿ ಮೂಲಕ ರವಾನಿಸಲಾಗಿದೆ. ಸಂದೇಶವು ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಮಾಲ್‌ಗಳ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಸ್ಥಳಗಳನ್ನು ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.
ಈ ಬಗ್ಗೆ ಬೆಂಗಳೂರಿನ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇ-ಮೇಲ್ ಐಡಿಯಲ್ಲಿ ಉಲ್ಲೇಖಿಸಲಾದ 'ಮೋಹಿತ್ ಕುಮಾರ್' ಎಂಬಾತನೇ ಆರೋಪಿಯೇ ಅಥವಾ ಬೇರೆ ಯಾರೋ ಈ ಐಡಿ ಬಳಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A hoax email sent to the Bengaluru City Police Commissioner’s official address threatened bomb blasts at Kempegowda International Airport and major shopping malls in the city, claiming to be from the “Jaish-e-Mohammed White Collar Terror Team.” The email, sent on November 30, 2025, warned of explosions after 7 PM and even demanded money via a phone number.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm