ಬ್ರೇಕಿಂಗ್ ನ್ಯೂಸ್
05-12-25 07:26 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.5 : ದಿಢೀರ್ ಆಗಿ ಇಂಡಿಗೋ ಏರ್‌ಲೈನ್ಸ್ ವಿಮಾನ ಹಾರಾಟವನ್ನು ರದ್ದುಗೊಳಿಸಿದ್ದರಿಂದಾಗಿ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ವಧು-ವರರು ಆರತಕ್ಷತೆಗೆ ಬರಲಾಗದೆ, ಅನಿವಾರ್ಯ ಕಾರಣದಿಂದ ಆನ್‌ಲೈನ್ ಮೂಲಕವೇ ಆರತಕ್ಷತೆ ಮುಗಿಸಿದ ಪ್ರಸಂಗ ನಡೆದಿದೆ.
ಮಗಳು-ಅಳಿಯ ಬರಲಾಗದ್ದರಿಂದ ಅವರ ಬದಲು ವಧುವಿನ ತಂದೆ - ತಾಯಿಯೇ ಕುಳಿತು ಆರತಕ್ಷತೆ ಶಾಸ್ತ್ರ ಮುಗಿಸಿದ್ದಾರೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿರುವ ಹುಬ್ಬಳ್ಳಿಯ ಮೇಧಾ ಕ್ಷೀರಸಾಗರ ಹಾಗೂ ಒಡಿಶಾದ ಭುವನೇಶ್ವರದ ಸಂಗ್ರಾಮ್ ದಾಸ್ ಪರಸ್ಪರ ಪ್ರೀತಿಸುತ್ತಿದ್ದರು. ಎರಡೂ ಕುಟುಂಬದವರ ಒಪ್ಪಿಗೆಯಲ್ಲಿ ಇಬ್ಬರ ಮದುವೆಯನ್ನು ಭುವನೇಶ್ವರದಲ್ಲಿ ನ.23ರಂದು ನೆರವೇರಿಸಲಾಗಿತ್ತು.



ಮದುವೆ ಸಲುವಾಗಿ ವಧುವಿನ ತವರು ಹುಬ್ಬಳ್ಳಿಯಲ್ಲಿ ಡಿ.3ರಂದು ಆರತಕ್ಷತೆ ಆಯೋಜಿಸಿದ್ದು ಇದಕ್ಕಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಸಿದ್ಧತೆ ಮಾಡಲಾಗಿತ್ತು. ವಧು ಹಾಗೂ ವರನ ಸಂಬಂಧಿಕರೂ ಬಂದಿದ್ದರು. ವಧು - ವರರು ಭುವನೇಶ್ವರದಿಂದ ಬೆಂಗಳೂರಿಗೆ, ಅಲ್ಲಿಂದ ಹುಬ್ಬಳ್ಳಿಗೆ ಡಿ.2ಕ್ಕೆ ವಿಮಾನ ಬುಕ್ ಮಾಡಿದ್ದರು. ಸಂಬಂಧಿಕರಿಗೆ ಭುವನೇಶ್ವರದಿಂದ ಮುಂಬೈ, ಅಲ್ಲಿಂದ ಹುಬ್ಬಳ್ಳಿಗೆ ವಿಮಾನದ ಟಿಕೆಟ್ ಬುಕ್ ಆಗಿತ್ತು.
ಆದರೆ, ಡಿ.2ರ ಬೆಳಗ್ಗೆ 9ರಿಂದ ಮರುದಿನ (ಡಿ.3) ಬೆಳಗ್ಗೆ ವರೆಗೂ ವಿಮಾನ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದ ಇಂಡಿಗೋ ಸಿಬ್ಬಂದಿ, ಡಿ.3ರ ಬೆಳಗ್ಗೆ ವಿಮಾನ ರದ್ದಾಗಿದೆ ಎಂದು ಪ್ರಕಟಿಸಿದ್ದರು. ಹೀಗಾಗಿ, ಬರುವುದು ಸಾಧ್ಯವಾಗದೇ ವಧು, ವರ ಮತ್ತು ವರನ ಪಾಲಕರೆಲ್ಲ ಭುವನೇಶ್ವರದಲ್ಲೇ ಬಾಕಿಯಾಗಿದ್ದರು.
ವಧುವಿನ ತಂದೆ ಅನಿಲ್ ಕಮಾರ್ ಪ್ರತಿಕ್ರಿಯಿಸಿ, ಡಿ.2ಕ್ಕೆ ವಿಮಾನದ ಟಿಕೆಟ್ ಬುಕ್ ಮಾಡಲಾಗಿತ್ತು. ಆದರೆ, 18-20 ಗಂಟೆ ಕಾಯಿಸಿ ನಂತರ ವಿಮಾನ ರದ್ದಾಗಿದ್ದನ್ನು ಪ್ರಕಟಿಸಿದರು. ನಾವು ಲಕ್ಷಾಂತರ ರೂ. ಖರ್ಚು ಮಾಡಿ ಆರತಕ್ಷತೆಗೆ ಸಿದ್ಧತೆ ಮಾಡಿದ್ದೆವು. ಏನು ಮಾಡುವುದು ಎಂದು ತೋಚದಿದ್ದಾಗ ಕೊನೆಗೆ ಆನ್‌ಲೈನ್ ಮೂಲಕವೇ ಆರತಕ್ಷತೆ ನಡೆಸಲು ತೀರ್ಮಾನಿಸಿದೆವು. ವಿಮಾನ ಸಂಸ್ಥೆಯ ವಿಳಂಬದ ಬಗ್ಗೆ ಮೊದಲೇ ತಿಳಿದಿದ್ದರೆ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದೆವು ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ವಧುವಿನ ತಂದೆ - ತಾಯಿಯೇ ವಧು - ವರರ ಕುರ್ಚಿಯಲ್ಲಿ ಕುಳಿತರೆ, ಅತ್ತ ವಧು-ವರ ಭುವನೇಶ್ವರದಲ್ಲೇ ಕುಳಿತು ಆನ್‌ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆ ಮುಗಿಸಿದರು. ಬಂದಿದ್ದ ಸಂಬಂಧಿಕರು ವರ್ಚುವಲ್ ಮೂಲಕ ವಧು-ವರರನ್ನು ಕಂಡು ತಂದೆ - ತಾಯಿಗೆ ಗಿಫ್ಟ್ ಕೊಟ್ಟು ಊಟ ಮುಗಿಸಿದರು.
A rare incident unfolded in Hubballi when the bride and groom, scheduled to attend their aaratakshe ceremony on December 3, were unable to reach the venue due to the sudden cancellation of their IndiGo Airlines flight. As a result, the couple joined virtually, and the bride’s parents performed the ritual in their place at Gujarat Bhavan, where elaborate arrangements had already been made.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm