ಬ್ರೇಕಿಂಗ್ ನ್ಯೂಸ್
08-12-25 10:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.8 : ಗ್ಯಾರಂಟಿ ಘೋಷಣೆಗಳ ವಿರುದ್ದ ಸಲ್ಲಿಸಲಾದ ಅರ್ಜಿ ಸಂಬಂಧಿಸಿ ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಜನ ಎಂಎಲ್‌ಎಗಳು ಅನರ್ಹವಾಗುವುದು ಖಚಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ದರು. ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನ ಕೊಡುತ್ತಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು ಎಂದು ತಿಳಿಸಿದರು.
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ದರು. ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅಪೀಲ್ ಫೈಲ್ ಮಾಡಿದ್ದೆವು ಎಂದರು.
ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಇದರಲ್ಲಿ ಹಲವಾರು ತಪ್ಪುಗಳು, ಲೋಪಗಳಿದ್ದು ಪ್ರಕರಣದಲ್ಲಿ ಅಪರಾಧ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಘನ ನ್ಯಾಯಾಲಯದ ನ್ಯಾಯದ ಮುಂದೆ ಯಾವುದೇ ಅಧಿಕಾರ, ಅಂತಸ್ತು ಉಳಿಯುವುದಿಲ್ಲ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಅತೀ ಶೀಘ್ರದಲ್ಲೇ ಉಚಿತ ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ. ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ದೇವರಾಜೇಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಕೇಸಿನಲ್ಲಿಯೂ ಗ್ಯಾರಂಟಿ ಯೋಜನೆಗಳ ಔಚಿತ್ಯಗಳ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಲಂಚ ನೀಡಿದ್ದಾರೆಂದು ಆರೋಪಿಸಲಾಗಿದೆ. ವರುಣಾ ಕ್ಷೇತ್ರದ ಮತದಾರ ಕೆ.ಶಂಕರ್ ಸಲ್ಲಿಸಿದ ದೂರನ್ನು ಹೈಕೋರ್ಟಿನಲ್ಲಿ ವಜಾ ಮಾಡಲಾಗಿತ್ತು.
A petition challenging the Congress government’s guarantee schemes has led the Supreme Court to issue summons to Karnataka Chief Minister Siddaramaiah, requiring his personal appearance. BJP leader and advocate Devarajegowda claimed that this development could lead to the disqualification of all 224 MLAs, arguing that the free guarantees announced during the 2023 elections amounted to offering inducements to voters.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm