ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹಾರಿ ಬಸ್​ಗೆ ಡಿಕ್ಕಿ ಹೊಡೆದ ಕಿಯಾ ಕಾರು, ಸ್ಥಳದಲ್ಲೇ ಮೂವರು ಯುವಕರ ಸಾವು 

11-12-25 12:14 pm       Bangalore Correspondent   ಕರ್ನಾಟಕ

ಬೆಂಗಳೂರು ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ತಡರಾತ್ರಿ ಕಾರು ಹಾಗೂ ಕೆಎಸ್ಆರ್​ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಬೆಂಗಳೂರು, ಡಿ.11 : ಬೆಂಗಳೂರು ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ತಡರಾತ್ರಿ ಕಾರು ಹಾಗೂ ಕೆಎಸ್ಆರ್​ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಕಾರು ಹಾಗೂ ಕೆಎಸ್​ಆರ್​ಟಿಸಿ ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. 

ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ತಿಳಿದು ಬಂದಿದೆ .

ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ವೇಗವಾಗಿ ಬರ್ತಿದ್ದ KA 50 MA 0789 ಸಂಖ್ಯೆಯ ಕಿಯಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

A tragic road accident occurred near Lalgondanahalli Gate on the Devanahalli outskirts late last night. A speeding Kia car jumped the road divider and collided head-on with a KSRTC bus, killing three young men on the spot.