ಬ್ರೇಕಿಂಗ್ ನ್ಯೂಸ್
13-12-25 08:38 pm HK News Desk ಕರ್ನಾಟಕ
ತುಮಕೂರು, ಡಿ.13 : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿರುವಂತೆಯೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸಿಎಂ ಆಗಲೆಂದು ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ತನ್ನ ಗೆಲುವಿಗೆ ಕೆಲವು ಕಾಂಗ್ರೆಸ್ ನಾಯಕರ ಸಹಕಾರವೂ ಇತ್ತೆಂದು ಹೇಳುವ ಮೂಲಕ ಹೊಸ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
ಹೆಗ್ಗೆರೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿ. ಸೋಮಣ್ಣ, ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ. ಇದನ್ನ ನಾನೊಬ್ಬನೇ ಹೇಳುತ್ತಿಲ್ಲ. ತುಮಕೂರಿನ ಮಹಾಜನತೆಯೂ ಹೇಳುತ್ತಿದ್ದಾರೆ ಎಂದರು.
ಪಕ್ಕದಲ್ಲಿದ್ದ ಶಾಸಕ ಸುರೇಶ್ ಗೌಡ, ಹಾಗಾದ್ರೆ ಡಿಕೆ ಶಿವಕುಮಾರ್ ಏನಾಗಬೇಕು? ಎಂದು ಪ್ರಶ್ನೆ ಮಾಡಿದರು. ಆಮೇಲೆ ಮಾತನಾಡೋಣ. ಅದೆಲ್ಲ ಸೆಕೆಂಡರಿ, ಅವರ ನಡವಳಿಕೆಯೂ ಬೇಕಲ್ಲ ಎಂದು ಹೇಳುವ ಮೂಲಕ ಸೋಮಣ್ಣ ವಿಷಯಾಂತರ ಮಾಡಿದರು.
ಇದೇ ವೇಳೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರೂ ತನ್ನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಪರಮೇಶ್ವರ್ ಅವರ ಸಮ್ಮುಖದಲ್ಲಿಯೇ ಕೆಲವು ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ವಿ. ಸೋಮಣ್ಣ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ. ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ಬಗ್ಗೆ ಚರ್ಚೆ ನಡೆಯುವಂತಾಗಿದೆ.
Amid the ongoing tussle within the Karnataka Congress over the chief minister’s post, Union Minister of State for Railways and Jal Shakti V. Somanna has openly backed Home Minister Dr G. Parameshwara as a potential Chief Minister, while also making a startling revelation that some Congress leaders had helped him secure his Lok Sabha victory.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm