ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm