ಬ್ರೇಕಿಂಗ್ ನ್ಯೂಸ್
17-12-25 10:30 pm HK News Desk ಕರ್ನಾಟಕ
ಬೆಳಗಾವಿ, ಡಿ.17 : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಎದುರಾಗಿದ್ದು ಅಧಿವೇಶನ ಬಿಟ್ಟು ವಿಶ್ರಾಂತಿಗೆ ಜಾರಿದ್ದಾರೆ. ತೀವ್ರ ಹೊಟ್ಟೆ ನೋವಿನ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಸಿಎಂ ಸದನಕ್ಕೆ ಗೈರಾಗಿದ್ದು, ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿದ್ದರಿಂದ ವೈದ್ಯರ ಸಲಹೆಯಂತೆ ಅಧಿವೇಶನಕ್ಕೆ ಹೋಗದೆ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಸಂಪೂರ್ಣ ವಿಶ್ರಾಂತಿಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಯತೀಂದ್ರ ಸೇರಿದಂತೆ ಹಲವರು ಬಂದು ಆರೋಗ್ಯ ವಿಚಾರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ವಿಷಯ ತಿಳಿಯುತ್ತಿದ್ದಂತೆ ವಿವಿಧ ಪಕ್ಷಗಳ ನಾಯಕರು ಸರ್ಕ್ಯೂಟ್ ಹೌಸ್‌ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕಾಂಗಿಯಾಗಿ ಬಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಭೇಟಿಯ ಬಳಿಕ ಮಾತನಾಡಿದ ಜಾರಕಿಹೊಳಿ, 'ಇದು ಕೇವಲ ಸೌಜನ್ಯದ ಭೇಟಿ. ಸಿಎಂ ಅವರಿಗೆ ಧೈರ್ಯ ಹೇಳುವ ಅವಶ್ಯಕತೆಯಿಲ್ಲ, ಅವರೇ ನಮಗೆ ಧೈರ್ಯ ಹೇಳುವಷ್ಟು ಗಟ್ಟಿಯಾಗಿದ್ದಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದರು.
ಮತ್ತೊಂದೆಡೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಸಿಎಂ ಅವರನ್ನು ಭೇಟಿ ಮಾಡಿದರು. ಸಿಎಂ ಆಪ್ತ ಸಚಿವ ಬೈರತಿ ಸುರೇಶ್ ಮಾಧ್ಯಮಗಳಿಗೆ ಮಾತನಾಡಿ, 'ಸಿಎಂ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಅವರ ಜೊತೆಗೆ ನಾನು ಊಟ ಮಾಡಿದ್ದೇನೆ, ಅವರು ಚೆನ್ನಾಗಿದ್ದಾರೆ. ನಾಳೆ ಸದನದಲ್ಲಿ ಹಲವು ಪ್ರಮುಖ ವಿಷಯಗಳಿಗೆ ಸಿಎಂ ಉತ್ತರ ನೀಡಬೇಕಿದೆ, ಹೀಗಾಗಿ ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿ ಗೊಂದಲಕ್ಕೆ ತೆರೆ ಎಳೆದರು.
Karnataka Chief Minister Siddaramaiah experienced a health setback during the ongoing winter session of the legislature in Belagavi and remained absent from the Assembly on Wednesday. He reportedly developed severe stomach pain and, following medical advice, opted to take rest at the Circuit House.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm