ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು, ಸಚಿವೆ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆಯ ಉದ್ಯೋಗಿ ಯುವಕ 

18-12-25 11:05 pm       HK News Desk   ಕರ್ನಾಟಕ

ಡಿಸಿಎಂ ಡಿಕೆಶಿ ಖಾಸಗಿ ಪಿಎ ಮತ್ತು ಇತರರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.‌

ಬೆಳಗಾವಿ, ಡಿ.18 : ಡಿಸಿಎಂ ಡಿಕೆಶಿ ಖಾಸಗಿ ಪಿಎ ಮತ್ತು ಇತರರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.‌

ಸವದತ್ತಿ ಪಟ್ಟಣದ ನಿವಾಸಿ, ಬೈಕ್ ಸವಾರ ಮಂಜುನಾಥ್ ಬೈರ್ನಟ್ಟಿ(30) ಮೃತ ದುರ್ದೈವಿ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸಕ್ಕಿದ್ದ ಮಂಜುನಾಥ್, ಅಲ್ಲಿಗೆ ಹೋಗುತ್ತಿದ್ದಾಗಲೇ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾಗಿ ಮಂಜುನಾಥ್ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವಾಗಿದೆ. 

ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು ಪಿಎ ರಾಜೇಂದ್ರ ಪ್ರಸಾದ್ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿ ಇವರು ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುತ್ತಿದ್ದರು.

A tragic road accident claimed the life of a bike rider after a car carrying the private secretary and associates of Deputy Chief Minister D.K. Shivakumar rammed into his two-wheeler on the outskirts of Saundatti town in Belagavi district on Wednesday.