ಬ್ರೇಕಿಂಗ್ ನ್ಯೂಸ್
24-12-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಶಾಸಕರಿಗೆ ಬಂಧನ ಭೀತಿ ಎದುರಾಗಿದ್ದು, ಅರೆಸ್ಟ್ ಆಗುವ ಭಯದಲ್ಲಿ ತಲೆಮರೆಸಿಕೊಂಡಿದ್ದಾರೆ.
ಶಾಸಕ ಬೈರತಿ ಬಸವರಾಜ್ ಒಂದು ವಾರದಿಂದ ನಾಪತ್ತೆಯಾಗಿದ್ದು, ಮಹಾರಾಷ್ಟ್ರ ತಮಿಳುನಾಡು, ಗೋವಾದಲ್ಲಿ ರಾಜ್ಯದ ಮೂರು ಪೊಲೀಸ್ ವಿಶೇಷ ತಂಡಗಳು ಹುಡುಕಾಟ ನಡೆಸುತ್ತಿವೆ. ನಿರೀಕ್ಷಣಾ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಬೈರತಿ ಬಸವರಾಜ್‌ಗೆ ಬೆಂಗಳೂರಿನ ಕೋರ್ಟ್ ಶಾಕ್ ನೀಡಿದ್ದರಿಂದ ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆಯಿದೆ.
ಬಂಧನ ಭೀತಿ ನಡುವೆಯೇ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಬಗ್ಗೆ ವಕೀಲರು ಚರ್ಚೆಯಲ್ಲಿದ್ದಾರೆ. ಮಂಗಳವಾರ (ಡಿ.23) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ವಾದ ಆಲಿಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರಾಗಿದ್ದು ಬೈರತಿ ಬಸವರಾಜ್‌ರನ್ನ ಆರೋಪಿ 5 ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಸಿಐಡಿಗೆ ಪ್ರಕರಣ ವರ್ಗಾವಣೆ ಆದ ನಂತರ ನಿನ್ನೆಯವರೆಗೂ ಸಿಐಡಿ ನೋಟಿಸ್ ನೀಡಿಲ್ಲ, ಸಮನ್ಸ್ ಕೊಟ್ಟಿಲ್ಲ. ಹೇಗೆ ವಿಚಾರಣೆಗೆ ಹಾಜರಾಗುವುದು? ಎಫ್‌ಐಆರ್‌ನಲ್ಲಿ ಹೆಸರು ಸೇರಿಸುವುದು ಬಿಟ್ಟು ಬೇರೆ ಏನು ಮಾಡಿದ್ದಾರೆ? ಐದು ತಿಂಗಳು ಸುಮ್ಮನಿದ್ದು ಈಗ ಕಸ್ಟೋಡಿಯಲ್ ಇಂಟ್ರಾಗೇಷನ್ ಅವಶ್ಯಕತೆ ಇದೆ ಎಂದು ಹೇಳುತ್ತಾರೆ. ಎಫ್‌ಐಆರ್ ದಾಖಲು ಮಾಡಿದ ನಂತರ ಕೋಕಾ ಕಾಯ್ದೆ ಜಾರಿ ಮಾಡುತ್ತಾರೆ. ಬೈರತಿ ಬಸವರಾಜ್ ಯಾವುದೇ ತನಿಖೆಗೂ ಸಿದ್ಧ, ಯಾವತ್ತು ಕರೆದರೂ ತನಿಖೆಗೆ ಬರುತ್ತಾರೆ ಎಂದು ವಕೀಲರು ವಾದ ಮಂಡಿಸಿದರು.
ಸಿಐಡಿ ಪರ ವಕೀಲ ಅಶೋಕ್ ನಾಯ್ಕ್ ವಾದ ಮಂಡಿಸಿದರು. ಹೈಕೋರ್ಟ್ ಆದೇಶದ ಮಾಹಿತಿ ತಿಳಿದು ಕಲಾಪಕ್ಕೆ ಹೋಗಿದ್ದವರು ಡಿ.18 ರಿಂದ ಎಸ್ಕೇಪ್ ಆಗಿದ್ದಾರೆ. ಸದನದಲ್ಲಿ ಇರಬೇಕಾದ ಶಾಸಕರು ಎಲ್ಲಿ ಹೋದ್ರು? ಕೊಲೆ ಕೇಸ್‌ನಲ್ಲಿ ಆರೋಪಿಗೆ ನೋಟಿಸ್ ಕೊಡುವ ಅಗತ್ಯ ಇಲ್ಲ. ಎ1 ರಿಂದ ಎ5 ತನಕ ಇರುವ ಆರೋಪಿಗಳು ಒಳಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ. ಎ1 ಜಗದೀಶ್, ಎ5 ಬೈರತಿ ಬಸವರಾಜ್ ಸಂಪರ್ಕದಲ್ಲಿದ್ದಾರೆ. ಎ1, ಎ5 ಕುಂಭಮೇಳಕ್ಕೆ ಹೋಗಿದ್ದಾರೆ ಎಂದು ದಾಖಲೆ ಸಲ್ಲಿಕೆಯಾಗಿದೆ. ಬೈರತಿಗೂ ಕೊಲೆಯಾದವನಿಗೆ ದೇವಸ್ಥಾನದ ಜಾಗದ ವಿಚಾರವಾಗಿ ಗಲಾಟೆ ಆಗಿದೆ. ಬೈರತಿ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಆದರೆ, ಕಣ್ಣಿಗೆ ಕಾಣಲ್ಲ. ಅವಲಹಳ್ಳಿ ಜಾಗದ ವಿಚಾರವಾಗಿ ಎ5 ಕೊಲೆಯಾದ ವ್ಯಕ್ತಿಯ ಮೇಲೆ ದೂರು ದಾಖಲಿಸಿದ್ದ. ಎ20, ಎ5 ಆಪ್ತ ಸಹಾಯಕರೇ ಜಾಗದ ಗಲಾಟೆ ವಿಚಾರಕ್ಕೆ ಹೋಗ್ತಾರೆ. ಎ1 ಬೈರತಿಗೆ ವಿಷಯ ತಿಳಿಸಿ ವಿದೇಶಕ್ಕೆ ಹೋಗಿದ್ದಾರೆ. ಇದು ಟವರ್ ಲೊಕೇಷನ್‌ನಲ್ಲಿ ತಿಳಿದಿದೆ. ಎ1 ವಿದೇಶಕ್ಕೆ ಎಸ್ಕೇಪ್ ಆಗಲು ಎ5 ಸಹಾಯ ಮಾಡಿದ್ದಾರೆ. ಎ5, ಇತರೆ ಆರೋಪಿಗಳಿಗೆ ಹೋಗಿ ಸರೆಂಡರ್ ಆಗಿ ಅಂತಾರೆ ಕಾಲ್ ರೆಕಾರ್ಡ್ಸ್ ಇದೆ. ನಾವು ತಾಂತ್ರಿಕ ಸಾಕ್ಷ್ಯಗಳಾದ ಸಿಡಿಆರ್, ಟವರ್ ಲೊಕೇಷನ್ ನೀಡುತ್ತೇವೆ ಎಂದು ವಕೀಲ ಅಶೋಕ್ ನಾಯ್ಕ್ ಟವರ್ ಲೊಕೇಷನ್, ಸಿಡಿಆರ್ ದಾಖಲೆ ಸಲ್ಲಿಕೆ ಮಾಡಿದರು.
After the anticipatory bail plea filed by BJP MLA Byrathi Basavaraj in the Bikklu Shiva murder case was rejected, CID officials have now issued a lookout notice against him. With this, the MLA is facing imminent arrest and has reportedly gone into hiding to avoid being taken into custody.
24-12-25 04:07 pm
Bangalore Correspondent
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
24-12-25 06:07 pm
Mangalore Correspondent
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm