ಬ್ರೇಕಿಂಗ್ ನ್ಯೂಸ್
31-12-25 02:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31 : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳು, ಶೆಡ್ಗಳ ತೆರವು ವಿಚಾರದಲ್ಲಿ ವಾಗ್ದಾಳಿ ನಡೆಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಭೇಟಿಯಾಗಿ ಕುಶಲೋಪರಿ ಮಾತನಾಡಿದ್ದಾರೆ. ಕೇರಳದ ವರ್ಕಳದಲ್ಲಿ ನಾರಾಯಣ ಗುರುಗಳ ಕಾರ್ಯಕ್ರಮಕ್ಕಾಗಿ ತೆರಳಿರುವ ಸಿದ್ದರಾಮಯ್ಯ ಅವರನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿಯಾಗಿದ್ದಾರೆ.
ಕೋಗಿಲು ಬಡಾವಣೆಯ ಅಕ್ರಮ ತೆರವಿನ ಬಗ್ಗೆ ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಕೋಗಿಲು ಬಡಾವಣೆ ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡುವುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸ ತೆರಳಿದ ಸಿಎಂ ಸಿದ್ದರಾಮಯ್ಯ, ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ಭೇಟಿ ವೇಳೆ, ಹೈಕಮಾಂಡ್ ಪ್ರತಿನಿಧಿ ಕೆಸಿ ವೇಣುಗೋಪಾಲ್ ಕೂಡ ಜೊತೆಗಿದ್ದರು.
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಈ ಬಗ್ಗೆ ಎಕ್ಸ್ ನಲ್ಲಿ ಸಂದೇಶ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದೇನೆ. ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಈ ವೇಳೆ ಹಾಜರಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
Karnataka Chief Minister Siddaramaiah met Kerala CM Pinarayi Vijayan in Thiruvananthapuram even as tensions continue over the eviction of alleged illegal settlers in Bengaluru’s Kogilu area. The meeting took place during Siddaramaiah’s visit to attend the Narayana Guru event in Varkala, accompanied by KC Venugopal and BK Hariprasad.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm