ಬ್ರೇಕಿಂಗ್ ನ್ಯೂಸ್
02-01-26 04:13 pm HK News Desk ಕರ್ನಾಟಕ
ಬಳ್ಳಾರಿ, ಜ.2 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಜನಾರ್ದನ ರೆಡ್ಡಿ ನಿವಾಸದ ಮುಂದೆ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಹಿನ್ನೆಲೆಯಲ್ಲಿ ರೆಡ್ಡಿ ವಿರುದ್ಧವೇ ಪ್ರಕರಣ ದಾಖಲಾಗಿದೆ.
ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮಕ್ಕಾಗಿ ಬಳ್ಳಾರಿ ನಗರದಲ್ಲಿ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಹಾಕಲು ವಿರೋಧಿಸಿದ್ದು ಗುರುವಾರ ರಾತ್ರಿ ಎರಡೂ ಕಡೆಯ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದಾರೆ. ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಟ್ಟಿದ್ದ ಬ್ಯಾನರನ್ನು ಬಿಜೆಪಿಗರು ಹರಿದು ಹಾಕಿದ್ದಾರೆಂದು ಗಲಾಟೆ ಶುರುವಾಗಿತ್ತು. ಆಬಳಿಕ ತಳ್ಳಾಟ ಜೋರಾಗಿದ್ದು ಕಲ್ಲು ತೂರಾಟ ಆಗಿದೆ.








ಗಲಾಟೆ ತೀವ್ರಗೊಳ್ಳುತ್ತಿದ್ದಂತೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಜೊತೆಗಿದ್ದ ಖಾಸಗಿ ಗನ್ ಮ್ಯಾನ್ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಎರಡೂ ಕಡೆಯಿಂದ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ಕೈ ಮೀರಿದ್ದನ್ನು ಗಮನಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲು ಯತ್ನಿಸಿದ್ದಾರೆ. ನಿಯಂತ್ರಣಕ್ಕೆ ಬಾರದೇ ಇದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಲಭೆ ನಡುವಲ್ಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರಿಗೆ ಗುಂಡು ತಗುಲಿದ್ದು, ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.
ಘಟನೆ ಸಂಬಂಧಿಸಿ ಪೊಲೀಸರು ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಅಲಿಖಾನ್, ದಮ್ಮೂರ ಶೇಖರ್ ಸೇರಿ 11 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರು ಶಾಸಕ ನಾರಾ ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ದನ ರೆಡ್ಡಿ ಬಂಧಿಸಲು ಒತ್ತಾಯಿಸಿ ಧರಣಿ ನಡೆಸಿದ್ದಾರೆ.
A clash between Congress and BJP workers over installing a banner for a Valmiki statue inauguration in Ballari turned violent on Thursday night, resulting in the death of a Congress worker, Rajshekhar. The incident occurred near Janardhana Reddy’s residence, where opposition to placing the banner led to stone-pelting, scuffles, and gunfire. A private gunman accompanying MLA Bharat Reddy’s aide reportedly fired shots during the chaos. Police resorted to lathi-charge and warning shots to disperse the crowd, but Rajshekhar succumbed to a bullet injury.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm