ಬ್ರೇಕಿಂಗ್ ನ್ಯೂಸ್
03-01-26 03:24 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಬಳ್ಳಾರಿ ನಗರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸರ್ಕಾರದ ದಿಢೀರ್ ಕ್ರಮದಿಂದ ತೀವ್ರ ಮನನೊಂದಿದ್ದ ಪವನ್ ಅವರು ತುಮಕೂರಿನ ತಮ್ಮ ನಿವಾಸದಲ್ಲಿ ಅತಿಯಾದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಮಂಡ್ಯ ಎಸ್ಪಿ ಡಾ. ಶೋಭಾರಾಣಿ ಇಂಥ ವದಂತಿಗಳ ಬಗ್ಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಜ.1 ರಂದು ಬಳ್ಳಾರಿ ಎಸ್ಪಿಯಾಗಿ ಪವನ್ ನೆಜ್ಜೂರ್ ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ನಂತರ ಶೋಭಾರಾಣಿ ಅವರು ತಮ್ಮ ಸಿಬ್ಬಂದಿಗೆ ಪಾರ್ಟಿ ನೀಡಿದ್ದರು. ಈ ಪಾರ್ಟಿಯಲ್ಲಿ ಪವನ್ ನಿಜ್ಜೂರು ಮದ್ಯ ಸೇವಿಸಿದ್ದರು. ಸಂಜೆ ವೇಳೆ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಗಲಾಟೆ ಆರಂಭವಾಗಿತ್ತು. ಗಲಾಟೆ ನಡೆಯುತ್ತಿದ್ದರೂ ಪವನ್ ಅವರು ಸ್ಥಳಕ್ಕೆ ಹೋಗಿರಲಿಲ್ಲ. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಿಗೆ ಅವರು ಮಾಹಿತಿ ನೀಡಬೇಕಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ ಬೆನ್ನಲ್ಲೇ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮತ್ತು ಡಿಜಿ, ಐಜಿ ಸಲೀಂ ಫೋನ್ ಮಾಡಿದರೂ ಪವನ್ ಕರೆಯನ್ನೇ ಸ್ವೀಕರಿಸಿರಲಿಲ್ಲ. ಕೂಡಲೇ ಚಿತ್ರದುರ್ಗದ ಎಸ್ಪಿಗೆ ಸ್ಥಳಕ್ಕೆ ಹೋಗುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರು. ಕೊನೆಗೆ ರಾತ್ರಿ ಪವನ್ ನೆಜ್ಜೂರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಪವನ್ ಸ್ಥಳಕ್ಕೆ ಭೇಟಿ ನೀಡುವ ಮೊದಲೇ ಉಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಅತಿಯಾದ ಕುಡಿತದಿಂದ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಾಧ್ಯಮಗಳ ಮುಂದೆ ಪವನ್ ಬಾರದಂತೆ ಹಿರಿಯ ಅಧಿಕಾರಿಗಳು ನೋಡಿಕೊಂಡಿದ್ದರು.
ಬಳ್ಳಾರಿ ರೇಂಜ್ ಡಿಐಜಿ ಆಗಿರುವ ವರ್ತಿಕಾ ಕಟಿಯಾರ್ ಈ ಎಲ್ಲಾ ವಿಚಾರಗಳನ್ನು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದರು. ಈ ವಿಚಾರ ಸರ್ಕಾರದ ಗಮನಕ್ಕೆ ಬಂದ ಬೆನ್ನಲ್ಲೇ ಅವರನ್ನು ಅಮಾನತು ಮಾಡುವ ನಿರ್ಧಾರ ಕೈಗೊಂಡಿತ್ತು
ಶಿರಾ ತಾಲೂಕಿನಲ್ಲಿ ಆತ್ಮಹತ್ಯೆಗೆ ಯತ್ನ :
ಸರ್ಕಾರದಿಂದ ಸಸ್ಪೆಂಡ್ ಆದ ನಂತರ ನೆಜ್ಜೂರ್ ಅವರು ತುಮಕೂರಿನ ಶಿರಾ ತಾಲೂಕಿನ ಬರಗೂರು ಎಂಬ ಗ್ರಾಮದಲ್ಲಿರುವ ತಮ್ಮ ಸ್ನೇಹಿತರೊಬ್ಬರ ಫಾರ್ಮ್ ಹೌಸ್ ನಲ್ಲಿ ತಂಗಿದ್ದರು. ಬೇಸರದಲ್ಲಿದ್ದ ಅವರು ಫಾರ್ಮ್ ಹೌಸ್ ನಲ್ಲಿಯೇ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದು ಸಾರ್ವಜನಿಕರ ದಿಗ್ಭ್ರಮೆಗೆ ಕಾರಣವಾಗಿದೆ. ಮಂಡ್ಯ ಎಸ್ಪಿ ಡಾ. ಶೋಭಾರಾಣಿಯವರಂತೂ ಇದು ಕೇವಲ ವದಂತಿಯಷ್ಟೇ, ಇದನ್ನು ನಂಬಬೇಡಿ ಎಂದು ಹೇಳಿದ್ದಾರೆ. ಆದರೆ, ಸರ್ಕಾರದಿಂದ ಈ ಬಗ್ಗೆ ಸ್ಪಷ್ಟನೆ ಹೊರಬೀಳಬೇಕಿದೆ.
ಪವನ್ ನೆಜ್ಜೂರುಗೆ ಸರ್ಕಾರದ ಅಮಾನತು ಆದೇಶ ದೊಡ್ಡ ಆಘಾತ ನೀಡಿತ್ತು ಎನ್ನಲಾಗಿದೆ. ಅಮಾನತು ಬೆನ್ನಲ್ಲೇ ತೀವ್ರ ಖಿನ್ನತೆಗೆ ಒಳಗಾಗಿದ್ದ ಅವರು, ಇಂದು ತುಮಕೂರು ನಿವಾಸದಲ್ಲಿದ್ದಾಗ ವಿಷಕಾರಿ ಮಾತ್ರೆಗಳನ್ನು ಸೇವಿಸಿದ್ದಾರೆ. ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಜನಾರ್ದನ ರೆಡ್ಡಿ ಅವರ ಮನೆ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ಬೆನ್ನಲ್ಲೇ ಎಸ್ಪಿಯ ಈ ನಡೆ ಪೊಲೀಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
Suspended Ballari SP Pavan Nejjur has reportedly attempted suicide by consuming excessive medication at a friend’s farmhouse in Baraguru, Shira taluk, Tumakuru. Nejjur was suspended following allegations of dereliction of duty during the recent violence in Ballari. According to reports, he had been deeply distressed after the government’s sudden action. He has been admitted to a hospital, where senior police officials have visited him.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm