ಬ್ರೇಕಿಂಗ್ ನ್ಯೂಸ್
05-01-26 08:17 pm HK News Desk ಕರ್ನಾಟಕ
ಕೊಪ್ಪಳ, ಜ.5 : ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಎದುರೇ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರು ಹೊಯ್ದಾಟ ನಡೆಸಿದ ಘಟನೆ ನಡೆದಿದ್ದು ತೀವ್ರ ಗದ್ದಲ, ವಾಗ್ವಾದಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪ್ರೋಟೋಕಾಲ್ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ ಹಿಟ್ನಾಳ್ ಅವರ ಹೆಸರು ಇಲ್ಲದಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಇದನ್ನು ಪ್ರೋಟೋಕಾಲ್ ಉಲ್ಲಂಘನೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು ಸಚಿವ ಸೋಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಾರ್ಯಕರ್ತರು ಕುರ್ಚಿ ಎಸೆಯಲು ಯತ್ನಿಸಿದ್ದು, ಸಚಿವ ಸೋಮಣ್ಣ ಅವರ ಕಾರಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು.




ಸಚಿವ ಸೋಮಣ್ಣ ಶಂಕುಸ್ಥಾಪನೆ ಮಾಡಲು ಮುಂದಾದಾಗ, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕೂಡ ಪ್ರೋಟೋಕಾಲ್ ವಿಚಾರವನ್ನು ಮುಂದಿಟ್ಟು ಸಚಿವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ ಬಳಿ ಸಚಿವ ಸೋಮಣ್ಣ, “ಇಂತಹ ಕಾರ್ಯಕ್ರಮಗಳಲ್ಲಿ ಪಟಾಲಂ ತೆಗೆದುಕೊಂಡು ಗಲಾಟೆ ಮಾಡಬೇಡಿ” ಎಂದು ಹೇಳಿದ್ದು ತಂಗಡಗಿ ಬೆಂಬಲಿಗರನ್ನು ಕೆರಳಿಸಿತು. ವೇದಿಕೆ ಬಳಿಯೇ ಎರಡೂ ಕಡೆಯ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಗಲಾಟೆ ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮ ಮೊಟಕುಗೊಳಿಸಿ ಸ್ಥಳದಿಂದ ತೆರಳಿದರು. ಹೀಗಾಗಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯದೆ ಅರ್ಧದಲ್ಲೇ ಮುಕ್ತಾಯಗೊಂಡಿತು. ಕಾರ್ಯಕ್ರಮ ಮುಗಿಸಿ ಹೊರಟಾಗಲೂ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸೋಮಣ್ಣ ಮೇಲೆ ಕುರ್ಚಿ ತೂರಲು ಯತ್ನಿಸಿದ್ದು, ಅಂಗರಕ್ಷಕರು ತಕ್ಷಣ ಅಡ್ಡ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಸೋಮಣ್ಣ, ಪ್ರೋಟೋಕಾಲ್ ಏನೂ ಉಲ್ಲಂಘನೆ ಆಗಿಲ್ಲ. ಇದು ಕೇಂದ್ರ ಸರ್ಕಾರದ ಹಣದಲ್ಲಿ ನಡೆಯುತ್ತಿರುವ ಯೋಜನೆ. ಉದ್ದೇಶಪೂರ್ವಕ ಕಾರ್ಯಕರ್ತರನ್ನು ತಂದು ಗಲಾಟೆ ಮಾಡಿಸಲಾಗಿದೆ” ಎಂದು ಆರೋಪಿಸಿದರು.
A railway flyover foundation event in Hitnal village turned chaotic when BJP and Congress workers clashed in front of Union Minister V. Somanna over alleged protocol violations. Congress supporters objected to the absence of District In-charge Minister Shivaraj Tangadagi and MP Rajshekhar Hitnal’s names on the event invitation.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am