ಬ್ರೇಕಿಂಗ್ ನ್ಯೂಸ್
10-01-26 10:28 pm HK News Desk ಕರ್ನಾಟಕ
ಗದಗ, ಜ 10 : ರಾಜ್ಯದ ಪ್ರಸಿದ್ಧ ಐತಿಹಾಸಿಕ ಸ್ಥಳವಾದ ಲಕ್ಕುಂಡಿ ಗ್ರಾಮದಲ್ಲಿ ಇಂದು ಸಂಚಲನ ಮೂಡಿಸುವ ಘಟನೆ ಜರುಗಿದೆ. ಮನೆಯ ಹೊಸ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಮಣ್ಣಿನ ಚೆಂಬುಯೊಂದರಲ್ಲಿ ಅಂದಾಜು ಒಂದು ಕಿಲೋಗ್ರಾಂ ತೂಕದ ಪುರಾತನ ಚಿನ್ನಾಭರಣಗಳು ಪತ್ತೆಯಾಗಿವೆ.
ಈ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ವಾರ್ಡ್ ಸಂಖ್ಯೆ 4ರ ನಿವಾಸಿ ಗಂಗವ್ವ ಬಸವರಾಜ ರಿತ್ತಿ ಅವರ ಮನೆ ಜಾಗದಲ್ಲಿ ನಡೆದಿದೆ. ಹಳೆಯ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಾಣಕ್ಕಾಗಿ ಕಾರ್ಮಿಕರು ಭೂಮಿ ಅಗೆಯುತ್ತಿದ್ದಾಗ ಈ ತಾಮ್ರದ ಚೆಂಬು ಸಿಕ್ಕಿದೆ. ಚೆಂಬಿನೊಳಗೆ ಚಿನ್ನದ ಬಳೆಗಳು, ಚೈನ್ಗಳು, ಉಂಗುರಗಳು ಮತ್ತು ಇತರ ಆಭರಣಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ನಿಧಿ ಪತ್ತೆಯ ಸುದ್ದಿ ತಿಳಿದ ತಕ್ಷಣ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಜನರು ಕುತೂಹಲದಿಂದ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ. ಇಡೀ ಪ್ರದೇಶವೇ ಜನಸಂದಣಿಯಿಂದ ತುಂಬಿಹೋಗಿದೆ.
ನಿಧಿ ಸಿಕ್ಕ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರ್ಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಸಹಾಯಕ ಆಯುಕ್ತ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಪುರಾತತ್ವ ಇಲಾಖೆಯ ಅಧಿಕಾರಿಗಳು ಮತ್ತು ಸಂಬಂಧಿತ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುರಾತತ್ವ ಇಲಾಖೆಯ ತಜ್ಞರು ಈ ಚಿನ್ನಾಭರಣಗಳನ್ನು ಪರಿಶೀಲಿಸುತ್ತಿದ್ದು, ಇವು ಯಾವ ಕಾಲಘಟ್ಟಕ್ಕೆ ಸೇರಿವೆ, ಯಾವ ರಾಜವಂಶದ್ದು ಮತ್ತು ಯಾವ ಉದ್ದೇಶಕ್ಕಾಗಿ ನೆಲದಡಿಯಲ್ಲಿ ಮರೆಮಾಚಲಾಗಿತ್ತು ಎಂಬುದನ್ನು ತನಿಖೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ವರದಿಗಳ ಪ್ರಕಾರ ಇವು ಲಕ್ಷ್ಮೀ ದೇವಸ್ಥಾನಕ್ಕೆ ಸಂಬಂಧಿಸಿದ್ದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದ್ದು, ಎಲ್ಲ ವೈಜ್ಞಾನಿಕ ತನಿಖೆ ಮತ್ತು ಪರೀಕ್ಷೆಗಳ ನಂತರವಷ್ಟೇ ಖಚಿತಪಡಿಸಲಾಗುವುದು ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ದು ಪಾಟೀಲ್ ಅವರು ತಿಳಿಸಿದ್ದಾರೆ.
ಲಕ್ಕುಂಡಿಯು ಕಲ್ಯಾಣ ಚಾಲುಕ್ಯರ ಕಾಲದ ಅದ್ಭುತ ದೇವಾಲಯಗಳು, ಮೆಟ್ಟಿಲು ಬಾವಿಗಳು, ಶಾಸನಗಳು ಮತ್ತು ಇತಿಹಾಸದ ಗುಪ್ತ ರತ್ನಗಳಿಂದ ಕೂಡಿದ ಸ್ಥಳವಾಗಿದ್ದು, ಇತ್ತೀಚೆಗೆ ಪ್ರಾಚ್ಯ ವಸ್ತುಗಳ ಸಂಗ್ರಹಣೆ, ಉತ್ಖನನ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಚಿನ್ನದ ನಿಧಿ ಸಿಗುವುದು ಇನ್ನಷ್ಟು ಆಸಕ್ತಿ ಕೆರಳಿಸಿದೆ. ಇದು ಚಾಲುಕ್ಯರ ಕಾಲದಲ್ಲಿ ಲಕ್ಕುಂಡಿಯಲ್ಲಿ ಚಿನ್ನದ ನಾಣ್ಯಗಳ ಮುದ್ರಣಗೊಂಡಿದ್ದ ಸ್ಥಳವಾಗಿದ್ದನ್ನು ನೆನಪಿಸುತ್ತದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಭಾರಿ ಉತ್ಸಾಹ ಮತ್ತು ಕುತೂಹಲ ಮೂಡಿದ್ದು, ಪುರಾತತ್ವ ಇಲಾಖೆಯ ತನಿಖೆಯ ಫಲಿತಾಂಶಕ್ಕೆ ಎಲ್ಲರೂ ಕಾಯುತ್ತಿದ್ದಾರೆ. ಇದು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಇನ್ನಷ್ಟು ಜಾಗೃತಗೊಳಿಸುವ ಸಂಗತಿಯಾಗಿದೆ.
A sensational discovery was made at the historic village of Lakkundi in Gadag district when workers unearthed an earthen pot containing around one kilogram of ancient gold ornaments while digging the foundation for a new house. The incident occurred at the residence of Gangavva Basavaraj Ritti in Ward No. 4 of Lakkundi village.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm