ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್ಲೇ ನೇಣಿಗೆ ಶರಣಾದ ಶಿವಮೊಗ್ಗದ ಸರ್ಕಾರಿ ಶಿಕ್ಷಕ ! 

15-01-26 05:56 pm       HK News Desk   ಕರ್ನಾಟಕ

ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ಕರ್ತವ್ಯನಿರತ ಶಿಕ್ಷಕರೊಬ್ಬರು ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಶಿವಮೊಗ್ಗ, ಜ 15 : ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ಕರ್ತವ್ಯನಿರತ ಶಿಕ್ಷಕರೊಬ್ಬರು ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಶಿಕಾರಿಪುರ ತಾಲ್ಲೂಕಿನ ಜೀನಹಳ್ಳಿ ಗ್ರಾಮದ ನಿವಾಸಿ, ಪ್ರಸ್ತುತ ಹೊನ್ನಾಳಿಯಲ್ಲಿ ವಾಸವಿದ್ದ ಧನಂಜಯ (51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಇವರು ಎಂದಿನಂತೆ ಬೆಳಗ್ಗೆ ಶಾಲೆಗೆ ಆಗಮಿಸಿದ್ದರು. ಶಾಲಾ ಕೆಲಸಕ್ಕೆ ಮುನ್ನ ಗ್ರಾಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನೂ ಮುಗಿಸಿ ಶಾಲೆಗೆ ಬಂದಿದ್ದರು. ನಂತರ ವಿದ್ಯಾರ್ಥಿಗಳಿಗೆ ಪಾಠವನ್ನೂ ಮಾಡಿದ್ದರು. ನಂತರ ಈ ಕೃತ್ಯಕ್ಕೆ ಕೈ ಹಾಕಿದ್ದಾರೆ.

ಮಧ್ಯಾಹ್ನದ ವಿರಾಮದ ಸಮಯದಲ್ಲಿ, ತರಗತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ ಶಿಕ್ಷಕರು, 'ನನಗೆ ಕೆಲವು ದಾಖಲೆಗಳನ್ನು ಬರೆಯುವ ಕೆಲಸವಿದೆ' ಎಂದು ಹೇಳಿ ಕೊಠಡಿಯ ಬಾಗಿಲು ಮತ್ತು ಕಿಟಕಿಗಳನ್ನು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಶಿಕ್ಷಕರು ಹೊರಗೆ ಬಾರದಿರುವುದನ್ನು ಗಮನಿಸಿದ ಸಹ ಶಿಕ್ಷಕರು ಅನುಮಾನಗೊಂಡು ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಕಿಟಕಿಯ ಮೂಲಕ ಇಣುಕಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಗ್ರಾಮಸ್ಥರು ಮತ್ತು ಶಿಕ್ಷಕರು ಸೇರಿ ಬಾಗಿಲು ಒಡೆದು ಒಳಪ್ರವೇಶಿಸಿ, ಧನಂಜಯ ಅವರನ್ನು ಕೆಳಗಿಳಿಸಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.

ಕೆಲಸದ ಒತ್ತಡದಿಂದಲೇ ನನ್ನ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲ ತಿಂಗಳ ಹಿಂದೆ ನನ್ನ ಗಂಡ ಕೆಲಸ ಬಿಡುವ ನಿರ್ಧಾರ ಮಾಡಿದರು, ಆದ್ರೆ ನಾನು ಬೇಡ ನಿಮ್ಮ ಈ ನಿರ್ಧಾರದಿಂದ ಮಕ್ಕಳಿಗೆ ತೊಂದರೆ ಆಗುತ್ತೆ ಅಂತ ಹೇಳಿದ್ದೆ. ನನ್ನ ಗಂಡ ಸಾಕಷ್ಟು ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಶಾಲಾ ಆವರಣದಲ್ಲಿ ನಡೆದ ಈ ಘಟನೆಯಿಂದಾಗಿ ಮಕ್ಕಳು ಭಯಭೀತರಾಗಿದ್ದು, ಗ್ರಾಮದಲ್ಲಿ ವಿಷಾದದ ಛಾಯೆ ಆವರಿಸಿದೆ.

A shocking incident was reported from a government higher primary school in Baluru village of Shikaripura taluk, Shivamogga district, where a 51-year-old teacher died by suicide inside a classroom on Thursday. The deceased, Dhananjaya, a resident of Jeenahalli village, had attended school as usual, completed official duties including voter list revision work, and taught students before taking the extreme step during the lunch break.