ಬ್ರೇಕಿಂಗ್ ನ್ಯೂಸ್
21-01-26 12:30 pm HK News Desk ಕರ್ನಾಟಕ
ರಾಯಚೂರು, ಜ 21 : ರಾಷ್ಟ್ರೀಯ ಹೆದ್ದಾರಿಯ 150 ಎ ವ್ಯಾಪ್ತಿಯ ಕನ್ಹೇರಿ ಕ್ರಾಸ್ ಹತ್ತಿರ ಬೊಲೆರೋ - ಪಿಕ್‌ಅಪ್ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರು, ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣ ಯಲ್ಲಯ್ಯ (45), ಅವರ ಪುತ್ರ ರಂಗನಾಥ (18), ಹರಿ ಮತ್ತು ಮಲ್ಲಯ್ಯ ಆದೋನಿ (35) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.
ಅಪಘಾತಕ್ಕೀಡಾದ ಒಂದು ಬೋಲೆರೊ ವಾಹನದಲ್ಲಿ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಮತ್ತೊಂದು ವಾಹನವು ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು. ವೇಗವಾಗಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ವಾಹನದಲ್ಲಿದ್ದ 10 ಕುರಿ, ಆಡುಗಳೂ ಘಟನೆಯಲ್ಲಿಸಾವನಪ್ಪಿವೆ.
ಸಿರುಗುಪ್ಪ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವಾಹನದಲ್ಲಿ ಚಾಲಕನಷ್ಟೇ ಇದ್ದು, ಬದುಕುಳಿದಿದ್ದಾರೆ. ಎದುರಿಗೆ ಬಂದ ಮತ್ತೊಂದು ವಾಹನದಲ್ಲಿದ್ದ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತರ ದೇಹಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗ್ರಾಮೀಣ ಠಾಣೆ ಪಿಎಸ್‌ಐ ಮೌನೇಶ ರಾಠೋಡ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ನೆರವಿಗೆ ಮುಂದಾದರು.
Five daily wage labourers lost their lives and three others were injured in a head-on collision between a Bolero and a pickup vehicle near Kanhari Cross on National Highway 150A in Raichur on January 21. The victims, reportedly from Challekudloor village in Ballari district, were travelling in the pickup vehicle.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm